ಭೂಮಿಯ ರಕ್ಷಣೆ ಎಲ್ಲರ ಜವಾಬ್ದಾರಿ : ಡಿ.ಕೆ.ಶಿವಕುಮಾರ್
ಬೆಂಗಳೂರು, 22 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಶ್ವ ಭೂ ದಿನದ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಸರ ಸಂರಕ್ಷಣೆ ಮತ್ತು ಭೂಮಿಯ ರಕ್ಷಣೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದು, ನಮ್ಮ ಗ್ರಹವನ್ನು ಕಾಪಾಡುವುದು ಆಯ್ಕೆಯ ವಿಷಯವಲ್ಲ, ಬದಲಾಗಿ ಎಲ್ಲರ ಹಂಚಿಕೆಯ ಜವಾಬ್ದಾರಿ ಎಂದು ಹೇಳಿದ
DKS


ಬೆಂಗಳೂರು, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಶ್ವ ಭೂ ದಿನದ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಸರ ಸಂರಕ್ಷಣೆ ಮತ್ತು ಭೂಮಿಯ ರಕ್ಷಣೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದು, ನಮ್ಮ ಗ್ರಹವನ್ನು ಕಾಪಾಡುವುದು ಆಯ್ಕೆಯ ವಿಷಯವಲ್ಲ, ಬದಲಾಗಿ ಎಲ್ಲರ ಹಂಚಿಕೆಯ ಜವಾಬ್ದಾರಿ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ನಾವು ಉಸಿರಾಡುವ ಗಾಳಿ, ಕುಡಿಯುವ ನೀರು ಹಾಗೂ ನಾವು ವಾಸಿಸುವ ಭೂಮಿಯನ್ನು ಭವಿಷ್ಯದ ಪೀಳಿಗೆಗಾಗಿ ಕಾಳಜಿಯಿಂದ ಸಂರಕ್ಷಿಸಬೇಕಾಗಿದೆ ಎಂದು ತಿಳಿಸಿದರು.

ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ, ಮಾಲಿನ್ಯ ಮತ್ತು ಪ್ರಕೃತಿ ಸಂಪನ್ಮೂಲಗಳ ದುರುಪಯೋಗದ ನಡುವೆ ಪ್ರತಿಯೊಬ್ಬರೂ ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾವೆಲ್ಲರೂ ಹಂಚಿಕೊಂಡಿರುವ ಏಕೈಕ ಮನೆಯಾಗಿರುವ ಭೂಮಿಯನ್ನು ರಕ್ಷಿಸಲು ಹೆಚ್ಚಿನ ಕಾಳಜಿ, ಜವಾಬ್ದಾರಿ ಮತ್ತು ಬದ್ಧತೆಯೊಂದಿಗೆ ಕಾರ್ಯನಿರ್ವಹಿಸೋಣ ಎಂದು ಅವರು ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande