ರಾಜ್ಯದಲ್ಲಿ ಎಐ–ಕ್ವಾಂಟಮ್ ತಂತ್ರಜ್ಞಾನಗಳಿಗೆ ಉತ್ತೇಜನ : ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ, ಕ್ವಾಂಟಮ್ ತಂತ್ರಜ್ಞಾನ ಮತ್ತು ಮೆಷಿನ್ ಲರ್ನಿಂಗ್ ಬಳಕೆಗೆ ಪೂರಕವಾದ ನೀತಿಗಳನ್ನು ಸರ್ಕಾರ ರೂಪಿಸಿದ್ದು, ಇದರಿಂದ ತಂತ್ರಜ್ಞಾನ ಕ್ಷೇತ್ರದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಸಣ್ಣ
ಭೋಸರಾಜು


ಬೆಂಗಳೂರು, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ, ಕ್ವಾಂಟಮ್ ತಂತ್ರಜ್ಞಾನ ಮತ್ತು ಮೆಷಿನ್ ಲರ್ನಿಂಗ್ ಬಳಕೆಗೆ ಪೂರಕವಾದ ನೀತಿಗಳನ್ನು ಸರ್ಕಾರ ರೂಪಿಸಿದ್ದು, ಇದರಿಂದ ತಂತ್ರಜ್ಞಾನ ಕ್ಷೇತ್ರದ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.

ಬೆಂಗಳೂರಿನ ನಗರದ ಏಟ್ರಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆಯೋಜಿಸಿದ್ದ ‘ವಿಜ್ಞಾನರಂಗ್-2026’ ತಾಂತ್ರಿಕ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನಗಳ ಬಳಕೆ ಇಂದಿನ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದ್ದು, ನಾವೀನ್ಯತೆ ಸಮಾಜದ ಅಭಿವೃದ್ಧಿಗೆ ಪ್ರಮುಖ ಚಾಲಕವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಆರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಬಿ.ಎನ್. ಚಿನ್ನಸ್ವಾಮಿ ರಾಜು ಅವರನ್ನು ಸ್ಮರಿಸಿದ ಸಚಿವರು, ಅವರು ಹಾಕಿಕೊಟ್ಟ ಶಿಕ್ಷಣದ ಬುನಾದಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕೈಗಾರಿಕೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳು ಪರಸ್ಪರ ಸಹಕಾರದಿಂದ ಬೆಳೆಯುವ ಉತ್ತಮ ಪರಿಸರ ವ್ಯವಸ್ಥೆ ನಿರ್ಮಾಣಗೊಂಡಿದೆ. ಮಕ್ಕಳಲ್ಲಿ ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವ ಬೆಳೆಸಲು ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ‘ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ’ ಮೂಲಕ ಸಂಶೋಧನೆ ಹಾಗೂ ನವೀನ ಆವಿಷ್ಕಾರಗಳಿಗೆ ಆರ್ಥಿಕ ಬೆಂಬಲ ನೀಡಲಾಗುತ್ತಿದೆ. ಜೊತೆಗೆ, ಬೆಂಗಳೂರಿನಲ್ಲಿ ನಿರ್ಮಾಣವಾಗಲಿರುವ ಸೈನ್ಸ್ ಸಿಟಿ ಭವಿಷ್ಯದ ತಂತ್ರಜ್ಞಾನ ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಲಿದೆ ಎಂದು ಹೇಳಿದರು.

ಯುವಜನರ ಹೊಸ ಆಲೋಚನೆಗಳು ಭವಿಷ್ಯದ ಸವಾಲುಗಳಿಗೆ ಪರಿಹಾರವಾಗಬಲ್ಲವು. ನೀರಿನ ನಿರ್ವಹಣೆ, ಸುಸ್ಥಿರ ಅಭಿವೃದ್ಧಿ ಮತ್ತು ಡಿಜಿಟಲ್ ಪರಿವರ್ತನೆ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಸಚಿವರು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande