
ಕಂಪ್ಲಿ, 23 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕಂಪ್ಲಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸ್ತಕ 2026-27 ಸಾಲಿಗೆ ಡಿಪೆÇ್ಲೀಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಠಾಕ್ರಾನಾಯ್ಕ ಅವರು ತಿಳಿಸಿದ್ದಾರೆ.
ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಕಮ್ಯೂನಿಕೇಷನ್ಸ್, ಮೆಕ್ಯಾನಿಕಲ್ ಹಾಗೂ ಸಿವಿಲ್ ಕೋರ್ಸ್ಗಳು ಲಭ್ಯವಿದ್ದು, ಎಸ್ಎಸ್ಎಲ್ಸಿ ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಫ್ ಲೈನ್ ಆಧಾರಿತ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ.9845181482, 9535285518, 9686412428, 8867688931, 9740203666, 7204050959, 9731979865, 8105556871, 9739147452 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್