ಖರ್ಗೆ ಹೇಳಿಕೆ ಖಂಡಿಸಿ ವಿಧಾನ ಸೌಧದ ಬಳಿ ಬಿಜೆಪಿ ಪ್ರತಿಭಟನೆ
ಬೆಂಗಳೂರು, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯನ್ನು ಖಂಡಿಸಿ, ಇಂದು ವಿಧಾನ ಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ
Bjp protest


ಬೆಂಗಳೂರು, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯನ್ನು ಖಂಡಿಸಿ, ಇಂದು ವಿಧಾನ ಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ , ಖರ್ಗೆ ಅವರ ಹೇಳಿಕೆ ನೀಚ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದರು. ಇಂತಹ ಅವಹೇಳನಕಾರಿ ಮಾತುಗಳು ಕಾಂಗ್ರೆಸ್ ಪಕ್ಷದ ಹತಾಶೆಯ ರಾಜಕೀಯವನ್ನು ತೋರಿಸುತ್ತವೆ ಎಂದು ಆರೋಪಿಸಿದರು.

ಪ್ರಧಾನ ಮಂತ್ರಿ ಸ್ಥಾನಕ್ಕೆ ಅವಮಾನವಾಗುವಂತಹ ಭಾಷೆಯನ್ನು ಬಳಸುವುದು ಸರಿಯಲ್ಲ. ಇದು ದೇಶದ ಜನತೆ ಗೌರವಿಸುವ ನಾಯಕನಿಗೆ ಮಾಡಿದ ಅವಮಾನವಾಗಿದೆ ಎಂದರು.

ಪ್ರತಿಭಟನೆಯಲ್ಲಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಪಿ.ಸಿ. ಮೋಹನ್ ಸೇರಿದಂತೆ ಹಲವರು ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande