




ಬಳ್ಳಾರಿ, 23 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಭಗೀರಥ ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ದೊಡ್ಡದಾಗಿದ್ದು ಪೆÇೀಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ನಡೆದ ಶ್ರೀ ಭಗೀರಥ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ರಾಜ್ಯ ಸರ್ಕಾರ 25ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ಸಮುದಾಯಗಳ ಜಯಂತಿಗಳನ್ನು ಆಚರಿಸುವ ಮೂಲಕ ಆಯಾ ಸಮಾಜದ ಮಹನೀಯರು ನೀಡಿದ ತಪಸ್ಸು, ತ್ಯಾಗ ಮತ್ತು ಮಾರ್ಗದರ್ಶನವನ್ನು ಇಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ಬಳ್ಳಾರಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ, ನಗರದ ಸಂಗನಕಲ್ಲಿನ ರಸ್ತೆಯೊಂದರ ವೃತ್ತವೊಂದಕ್ಕೆ `ಭಗೀರಥವೃತ್ತ’ ಎಂದು ನಾಮಕರಣ ಮಾಡಲು ಮಾಡಲು ಸರ್ಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪೆÇಲೀಸ್ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ದೊರೆತಿದೆ. ಮುಂದಿನ ಜಯಂತಿಯೊಳಗೆ ಅಧಿಕೃತವಾಗಿ ಉದ್ಘಾಟನೆ ಮಾಡಲಾಗುತ್ತದೆ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಉಪ್ಪಾರ ಸಮುದಾಯದವರು ಇತರರಿಗಾಗಿ ದುಡಿಯುವುದರಲ್ಲಿ ಮತ್ತು ಇತರರ ಕೆಲಸಗಳನ್ನು ಮಾಡಿಕೊಡುವುದರಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂದರು.
ನಿವೃತ ಶಿಕ್ಷಕ ಕೆ.ಬಿ. ಸಿದ್ದಲಿಂಗಪ್ಪ ಅವರು ವಿಶೇಷ ಉಪನ್ಯಾಸದಲ್ಲಿ, ಮಹರ್ಷಿ ಭಗೀರಥರು ತೀವ್ರ ತಪಸ್ಸಿನ ಮೂಲಕ ಸ್ವರ್ಗದಲ್ಲಿದ್ದ ಗಂಗಾನದಿಯನ್ನು ಭೂಮಿಗೆ ತಂದ ಪೌರಾಣಿಕ ರಾಜ. ಛಲ, ಪರಿಶ್ರಮ ಮತ್ತು ಜಲ ಸಂರಕ್ಷಣೆಯ ಸಂಕೇತವಾಗಿ ಇವರನ್ನು ಸ್ಮರಿಸಲಾಗುತ್ತದೆ. ಅಸಾಧ್ಯವಾದುದನ್ನು ಸಾಧಿಸುವ ವ್ಯಕ್ತಿತ್ವಕ್ಕೆ ಭಗೀರಥರು ಉದಾಹರಣೆಯಾಗಿದ್ದಾರೆ ಎಂದು ಹೇಳಿದರು.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಮುಖಂಡರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು.
ಕಂಪ್ಲಿಯ ಶೈಲಾ ದೇವರಮನಿ ತಂಡ ಭಕ್ತಿ ಸಂಗೀತ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಸಂವಿಧಾನ ಪೀಠಿಕೆ ಬೋಧಿಸಲಾಯಿತು.
ಶ್ರೀ ಭಗೀರಥ ಜಯಂತಿ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆಯು ನಗರದಲ್ಲಿ ಸಂಭ್ರಮದಿಂದ ಜರುಗಿತು. ಮೆರವಣಿಗೆಗೆ ಡಾ.ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್ ಅವರು ಚಾಲನೆ ನೀಡಿದರು.
ವಿವಿಧ ಸಾಂಸ್ಕøತಿಕ ಕಲಾತಂಡಗಳನ್ನೊಳಗೊಂಡ ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ರೈಲ್ವೇ ನಿಲ್ದಾಣ ರಸ್ತೆ, ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ದವರೆಗೆ ನಡೆಯಿತು.
ಸಹಾಯಕ ಆಯುಕ್ತರ ಕಚೇರಿಯ ತಹಶೀಲ್ದಾರ್ ಶಾಷಾವಲಿ, ಗ್ರೇಡ್-2 ತಹಶೀಲ್ದಾರ್ ವಿನಾಯಕ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್