
ದಾವಣಗೆರೆ, 23 ಏಪ್ರಿಲ್ (ಹಿ.ಸ.):
ಆ್ಯಂಕರ್ : ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆಗೆ ಸಂಬಂಧಿಸಿದಂತೆ ವಾರ್ಡ್ವಾರು ಕ್ಷೇತ್ರ ಪುನರ್ ವಿಂಗಡಣೆಯ ಕರಡು ಅಧಿಸೂಚನೆಯನ್ನು ಏಪ್ರಿಲ್ 23 ರಂದು ಅಧಿಕೃತ ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ಸದರಿ ಅಧಿಸೂಚನೆಯ ಪ್ರತಿಯು ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ, ಹರಿಹರದ ತಹಶೀಲ್ದಾರ್ ಕಚೇರಿ ಹಾಗೂ ನಗರಸಭೆ ಕಾರ್ಯಾಲಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಲಭ್ಯವಿರುತ್ತದೆ.
ಆಸಕ್ತ ಸಾರ್ವಜನಿಕರು ಈ ಕಚೇರಿಗಳಿಗೆ ಭೇಟಿ ನೀಡಿ ಅಧಿಸೂಚನೆಯ ವಿವರಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa