ಹಾವೇರಿ–ಶಿರಸಿ ರಸ್ತೆ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಲು ಸಂಸದ ಬೊಮ್ಮಾಯಿ ಸೂಚನೆ
ಹಾವೇರಿ, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಾಗರಮಾಲಾ ಯೋಜನೆಯಡಿ ಕೈಗೆತ್ತಿಕೊಂಡಿರುವ ಹಾವೇರಿ–ಶಿರಸಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಈ ತಿಂಗಳಾಂತ್ಯದೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಸಂಪೂರ್ಣ ಅನುಕೂಲವಾಗುವಂತೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿ
ಹಾವೇರಿ–ಶಿರಸಿ ರಸ್ತೆ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಲು ಸಂಸದ ಬೊಮ್ಮಾಯಿ ಸೂಚನೆ


ಹಾವೇರಿ, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಾಗರಮಾಲಾ ಯೋಜನೆಯಡಿ ಕೈಗೆತ್ತಿಕೊಂಡಿರುವ ಹಾವೇರಿ–ಶಿರಸಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಈ ತಿಂಗಳಾಂತ್ಯದೊಳಗೆ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಸಂಪೂರ್ಣ ಅನುಕೂಲವಾಗುವಂತೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾವೇರಿ ತಾಲೂಕು ಪಂಚಾಯತ್ ಆವರಣದಲ್ಲಿರುವ ಲೋಕಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಹಾನಗಲ್ ನಾಲ್ಕರ ಕ್ರಾಸ್ನಿಂದ ಸಮ್ಮಸಗಿ ವರೆಗಿನ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹಾಳಾಗಿರುವುದರಿಂದ ತಕ್ಷಣ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚಿಸಿದ ಅವರು, ಹಾವೇರಿ–ಹಾನಗಲ್ ಸಂಪರ್ಕ ರಸ್ತೆಯಲ್ಲಿನ ಹಾನಿಗೊಂಡ ಭಾಗಗಳನ್ನೂ ತುರ್ತಾಗಿ ಸರಿಪಡಿಸಲು ಹೇಳಿದರು.

“ಕಾಮಗಾರಿ ವಿಳಂಬ ಸಹಿಸಲಾಗುವುದಿಲ್ಲ. ಈ ತಿಂಗಳ 30ರೊಳಗೆ ರಸ್ತೆ ವಾಹನ ಸಂಚಾರಕ್ಕೆ ಯೋಗ್ಯವಾಗಬೇಕು. ನಾನು ಬಹಳ ಗಂಭೀರವಾಗಿ ಹೇಳುತ್ತಿದ್ದೇನೆ. ಕೆಲಸ ಸರಿಯಾಗಿ ಮಾಡದಿದ್ದರೆ ಅಧಿಕಾರಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು,” ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಈಗಾಗಲೇ 5 ಕಿ.ಮೀ ರಸ್ತೆಯ ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಬಿಡಬೇಕು. ಉಳಿದ 3 ಕಿ.ಮೀ ಕಾಮಗಾರಿ ತಕ್ಷಣ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. ಕಂತ್ರಿಕೊಪ್ಪದಿಂದ ಸಮ್ಮಸಗಿ ವರೆಗಿನ ರಸ್ತೆ ಸಂಪೂರ್ಣವಾಗಿ ಹಾಳಾಗಿರುವುದನ್ನು ಉಲ್ಲೇಖಿಸಿ, ಹಳೆಯ ರಸ್ತೆ ಸಂಪೂರ್ಣ ತೆಗೆದು ಎರಡು ಪದರದ ನಿರ್ಮಾಣ ಕಾರ್ಯ ನಡೆಸಬೇಕು ಎಂದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಾಮಗಾರಿ ಪ್ರಗತಿ ಕುರಿತು ಮಾಹಿತಿ ನೀಡಿದರು. ಕೆಲ ಭಾಗಗಳಲ್ಲಿ ಡಿಬಿಎಂ ಮತ್ತು ಜೆಎಸ್ಬಿ ಕೆಲಸ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿ ಮುಂದಿನ 25 ದಿನಗಳಲ್ಲಿ ಪೂರ್ಣಗೊಳಿಸುವ ಭರವಸೆ ನೀಡಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಸೇರಿದಂತೆ ಇಂಜಿನಿಯರ್ಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande