
ಬಳ್ಳಾರಿ, 23 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಶ್ರೀ ಶಾರದಾ ವಿದ್ಯಾ ಸಂಸ್ಥೆಯ ಎಸ್ಜಿವಿಆರ್ ಆಂಗ್ಲ ಮಾಧ್ಯಮ ಶಾಲೆ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆಗೈದಿದ್ದಾರೆ.
ಒಟ್ಟು 85 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕು. ಅಮೂಲ್ಯ ತಂ/ ಉಜ್ಜನಗೌಡ 625ಕ್ಕೆ 605 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿರುತ್ತಾರೆ. 18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಶೇಖಡಾ 95ರಷ್ಟು ಅಂಕಗಳನ್ನು ಗಳಿಸಿ ಶಾಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. 65ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್