ಎಸ್ಎಸ್ಎಲ್ಸಿ ಫಲಿತಾಂಶ ; ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಹೆಚ್ಚು ಅಂಕಗಳೊಂದಿಗೆ ವಿಶೇಷ ಸಾಧನೆ ಮಾಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳು ಇದೇ ರೀತಿಯ ಶ್ರದ್ಧೆ ಮತ್ತು ಪರಿಶ್ರಮ
Cm


ಬೆಂಗಳೂರು, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಹೆಚ್ಚು ಅಂಕಗಳೊಂದಿಗೆ ವಿಶೇಷ ಸಾಧನೆ ಮಾಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳು ಇದೇ ರೀತಿಯ ಶ್ರದ್ಧೆ ಮತ್ತು ಪರಿಶ್ರಮದ ಮೇಲೆ ನಂಬಿಕೆ ಇಟ್ಟು ಮುಂದುವರಿಯಬೇಕು. ಪರಿಶ್ರಮಕ್ಕೆ ಫಲ ಖಂಡಿತ ಸಿಗುತ್ತದೆ, ಯಶಸ್ಸು ನಿಮ್ಮದಾಗಲಿದೆ ಎಂದು ಅವರು ಪ್ರೇರಣೆಯ ಸಂದೇಶ ನೀಡಿದ್ದಾರೆ.

ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಧೃತಿಗೆಡಬಾರದು. ಮರುಪರೀಕ್ಷೆ ಬರೆಯುವ ಅವಕಾಶವಿದ್ದು, ಇಂದಿನಿಂದಲೇ ಸಿದ್ಧತೆ ಆರಂಭಿಸಿ ಉತ್ತಮ ಅಂಕಗಳೊಂದಿಗೆ ಯಶಸ್ಸು ಸಾಧಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಈ ಬಾರಿಯ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಶಿಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಪರಿಶ್ರಮವನ್ನು ಮುಖ್ಯಮಂತ್ರಿ ಶ್ಲಾಘಿಸಿದ್ದಾರೆ.

ಈ ಸಾಧನೆ ಇತರ ಜಿಲ್ಲೆಗಳಿಗೆ ಮಾದರಿಯಾಗಲಿ ಹಾಗೂ ರಾಜ್ಯದ ಶೈಕ್ಷಣಿಕ ಮಟ್ಟ ಮತ್ತಷ್ಟು ಹೆಚ್ಚಲೆಂದು ಅವರು ಆಶಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande