ಎಸ್ಎಸ್ಎಲ್ಸಿ ಫಲಿತಾಂಶ ; ಧನುಷ್ ಗೆ ಸಚಿವ ದಿನೇಶ್ ಗುಂಡೂರಾವ್ ಅಭಿನಂದನೆ
ಬೆಂಗಳೂರು, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ದತ್ತಾತ್ರೇಯ ದೇವಸ್ಥಾನ ವಾರ್ಡ್ನ ವಿದ್ಯಾರ್ಥಿ ಧನುಷ್ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ಅಪೂರ್ವ ಸಾಧನೆ ಮೆರೆದಿದ್ದಾರೆ. ಈ ಸಾಧನೆಗೆ ಕ್ಷೇತ್ರದ ಶಾಸಕ ಹಾಗೂ ಸಚಿವ ದಿನೇಶ್ ಗುಂಡೂರಾವ್ ಅಭ
Topper student dhanush


ಬೆಂಗಳೂರು, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ದತ್ತಾತ್ರೇಯ ದೇವಸ್ಥಾನ ವಾರ್ಡ್ನ ವಿದ್ಯಾರ್ಥಿ ಧನುಷ್ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿ ಅಪೂರ್ವ ಸಾಧನೆ ಮೆರೆದಿದ್ದಾರೆ. ಈ ಸಾಧನೆಗೆ ಕ್ಷೇತ್ರದ ಶಾಸಕ ಹಾಗೂ ಸಚಿವ ದಿನೇಶ್ ಗುಂಡೂರಾವ್ ಅಭಿನಂದನೆ ಸಲ್ಲಿಸಿದ್ದಾರೆ.

ಗಾಂಧಿನಗರದ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಮೆರೆದ ಧನುಷ್ ಅವರ ಸಾಧನೆ ಮಾದರಿಯಾಗಿದ್ದು, ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಸಚಿವರು ಹಾರೈಸಿದ್ದಾರೆ.

ಧನುಷ್ ಅವರ ಯಶಸ್ಸಿಗೆ ಬೆನ್ನೆಲುಬಾಗಿ ನಿಂತ ಪೋಷಕರಾದ ಸುಧೀರ್ ಮೈಸೂರು ಮತ್ತು ದಿವ್ಯಾ ಪ್ರಕಾಶ್ ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕ ವೃಂದಕ್ಕೂ ಸಚಿವರು ಅಭಿನಂದನೆ ತಿಳಿಸಿದ್ದಾರೆ.

ಇದೇ ವೇಳೆ, ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ಕ್ಷೇತ್ರದ ಇತರ ವಿದ್ಯಾರ್ಥಿಗಳಿಗೂ ಶುಭಾಶಯಗಳನ್ನು ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ವಿದ್ಯಾರ್ಥಿಗಳು ಧೃತಿಗೆಡಬಾರದು. ಸೋಲು ಶಾಶ್ವತವಲ್ಲ, ಅದು ಹೊಸ ಅವಕಾಶಗಳತ್ತ ಕರೆದೊಯ್ಯುವ ಒಂದು ಹಂತ ಮಾತ್ರ. ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕದೆ, ಅವರ ಆಸಕ್ತಿಗೆ ತಕ್ಕಂತೆ ಬೆಳೆಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande