
ಬೆಂಗಳೂರು, 23 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯವು 94.1 ಶೇಕಡಾ ಫಲಿತಾಂಶ ದಾಖಲಿಸಿದ್ದು, ಇದು ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲೇ ಅಪೂರ್ವ ಸಾಧನೆಯಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಸರ್ಕಾರದ ದೃಢ ಸಂಕಲ್ಪ ಹಾಗೂ ಶಿಕ್ಷಣ ಇಲಾಖೆಯ ನಿರಂತರ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು. ಇದು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಸಚಿವರು, ಅವರ ಸಾಧನೆಗೆ ಬೆಂಬಲವಾಗಿ ನಿಂತ ಪೋಷಕರು ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕ ವೃಂದಕ್ಕೂ ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆಗಾಗಿ ಕಾರ್ಯ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa