
ಮೈಸೂರು, 23 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಲೋಕ ಸಭೆ ಹಾಗೂ ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನಾ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟದ ಮಹಿಳಾ ವಿರೋಧಿ ನಿಲುವನ್ನು ಖಂಡಿಸಿ ಮಹಿಳಾ ಜನ್ ಆಕ್ರೋಶ ವ್ಯಕ್ತವಾಗಿದೆ ಎಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣಕ್ಕೆ ಸಹಕಾರ ನೀಡಬೇಕಾದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿರುವುದು ದುರ್ಭಾಗ್ಯಕರ ವಿದ್ಯಮಾನ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ಸೇರಿದಂತೆ ಪಕ್ಷದ ಮಹಿಳಾ ಮುಖಂಡರುಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa