ಯಶವಂತಪುರ–ಖರಗ್ಪುರ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ
ಬೆಂಗಳೂರು, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೇಸಿಗೆಯ ರಜಾ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ದಟ್ಟಣೆಯನ್ನು ಮನಗಂಡು ನೈಋತ್ಯ ರೈಲ್ವೆ ಯಶವಂತಪುರ ಮತ್ತು ಖರಗ್‌ಪುರ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರವನ್ನು ಆರಂಭಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06245 ಯಶವಂತಪುರದಿಂದ ಏಪ್ರಿಲ್ 2
ಯಶವಂತಪುರ–ಖರಗ್ಪುರ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ


ಬೆಂಗಳೂರು, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೇಸಿಗೆಯ ರಜಾ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುತ್ತಿರುವ ದಟ್ಟಣೆಯನ್ನು ಮನಗಂಡು ನೈಋತ್ಯ ರೈಲ್ವೆ ಯಶವಂತಪುರ ಮತ್ತು ಖರಗ್‌ಪುರ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರವನ್ನು ಆರಂಭಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06245 ಯಶವಂತಪುರದಿಂದ ಏಪ್ರಿಲ್ 24, 2026ರ ಶುಕ್ರವಾರ ರಾತ್ರಿ 11:15ಕ್ಕೆ ಹೊರಟು, ಭಾನುವಾರ ಬೆಳಿಗ್ಗೆ 9:30ಕ್ಕೆ ಖರಗ್‌ಪುರ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 06246 ಖರಗ್‌ಪುರದಿಂದ ಏಪ್ರಿಲ್ 26ರ ಭಾನುವಾರ ಮಧ್ಯಾಹ್ನ 12:00ಕ್ಕೆ ಹೊರಟು, ಸೋಮವಾರ ರಾತ್ರಿ 10:30ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಧೋಣ, ನಂದ್ಯಾಲ, ಮಾರ್ಕಾಪುರ ರೋಡ್, ನರಸರಾವ್ ಪೇಟೆ, ಗುಂಟೂರು, ವಿಜಯವಾಡ, ರಾಜಮಂಡ್ರಿ, ಕೊಟ್ಟವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಕ್ ಹಾಗೂ ಬಾಲೇಶ್ವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಒಟ್ಟು 20 ಬೋಗಿಗಳನ್ನು ಹೊಂದಿರುವ ಈ ರೈಲಿನಲ್ಲಿ 3 ಎಸಿ 3-ಟೈರ್, 12 ಸ್ಲೀಪರ್, 3 ಸಾಮಾನ್ಯ ದರ್ಜೆ ಹಾಗೂ ದಿವ್ಯಾಂಗ ಸ್ನೇಹಿ ಸೌಲಭ್ಯವುಳ್ಳ 2 ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.

ರೈಲು ಸಂಚಾರದ ಮೂಲಕ ಪ್ರಯಾಣಿಕರಿಗೆ ಸುಗಮ ಮತ್ತು ಅನುಕೂಲಕರ ಪ್ರಯಾಣ ವ್ಯವಸ್ಥೆ ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande