ರಾಜ್ಯದಲ್ಲಿ ಮುಂದಿನ 7 ದಿನ ಬಿಸಿಲು ಮಳೆ ಮುನ್ಸೂಚನೆ
ಬೆಂಗಳೂರು, 23 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವಾಮಾನ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನ ನಂತರ ಹಲವು ಕಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ಅಲ್ಲಲ್ಲಿ
ರಾಜ್ಯದಲ್ಲಿ ಮುಂದಿನ 7 ದಿನ ಬಿಸಿಲು ಮಳೆ ಮುನ್ಸೂಚನೆ


ಬೆಂಗಳೂರು, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಒಣ ಹವಾಮಾನ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮಧ್ಯಾಹ್ನ ನಂತರ ಹಲವು ಕಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ಅಲ್ಲಲ್ಲಿ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ವಿಶೇಷವಾಗಿ ಇಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿರುವುದರಿಂದ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande