
ನವಲಗುಂದ, 23 ಏಪ್ರಿಲ್ (ಹಿ.ಸ.) :
ಆ್ಯಂಕರ್ : ನವಲಗುಂದ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ‘ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026’ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು ಎಂದು ಮಾಜಿ ಸಚಿವ ಶಂಕರ ಪಾಟೀಲ್, ಮುನೇನಕೊಪ್ಪ ತಿಳಿಸಿದ್ದಾರೆ.
ಮಂಡಲ ಮಟ್ಟದ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಬಲವರ್ಧನೆ, ಕಾರ್ಯಕರ್ತರ ಸಾಮರ್ಥ್ಯ ವೃದ್ಧಿ ಹಾಗೂ ಮುಂದಿನ ದಿನಗಳ ಕಾರ್ಯಯೋಜನೆಗಳ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಲಾಗಿದೆ ಎಂದರು.
“ಬಲಿಷ್ಠ ಪಕ್ಷ ಸಂಘಟನೆ – ವಿಕಸಿತ ಭಾರತದ ದಿಕ್ಕಿನಲ್ಲಿ ನಮ್ಮ ಸಮರ್ಪಿತ ಹೆಜ್ಜೆ” ಎಂಬ ಧ್ಯೇಯದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಧಾರವಾಡ ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ ನಗರ ಘಟಕದ ಅಧ್ಯಕ್ಷ ಸಾಯಿಬಾಬಾ ಆನೆಗುಂದಿ, ಮಂಡಲ ಅಧ್ಯಕ್ಷ ಗಂಗಪ್ಪ ಮನಮಿ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು, ಭೂತ್ ಅಧ್ಯಕ್ಷರು ಮತ್ತು ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಘಟನೆ ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa