ರಾಜ್ ಸಂಭ್ರಮ ; ಗೀತೆ ಗಾಯನ, ಮಿಮಿಕ್ರಿ
ರಾಜ್ಕುಮಾರ್
ರಾಜ್ ಸಂಭ್ರಮ ; ಗೀತೆ ಗಾಯನ, ಮಿಮಿಕ್ರಿ


ಕೊಪ್ಪಳ, 23 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಡಾ. ರಾಜ್‌ ಕುಮಾರ್ ಅವರ 97ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ರಾಜ್ ಸಂಭ್ರಮ-2026ರ ಅಂಗವಾಗಿ ಏಪ್ರಿಲ್ 24 ರಂದು ಸಂಜೆ 5.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಡಾ. ರಾಜ್‌ ಕುಮಾರ್ ರವರ ಚಲನಚಿತ್ರ ಗೀತೆಗಳ ಗಾಯನ ಮತ್ತು ಡಾ. ರಾಜ್‌ ಕುಮಾರ್ ಅವರ ಸಿನೆಮಾಗಳ ಡೈಲಾಗ್ (ಮಿಮಿಕ್ರಿ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande