ಸಿಇಟಿ ಪರೀಕ್ಷೆಯಲ್ಲಿ ‘ಜನಿವಾರ’ ತೆಗೆಸಿದ ಆರೋಪ : ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ
ಬೆಂಗಳೂರು, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಜನಿವಾರ ತೆಗೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದ ಉದ್ಭವಿಸಿದೆ. ಈ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್
Ashok


ಬೆಂಗಳೂರು, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಜನಿವಾರ ತೆಗೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದ ಉದ್ಭವಿಸಿದೆ. ಈ ಘಟನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಅವರು, ಹಿಂದೂ ಧಾರ್ಮಿಕ ಆಚರಣೆಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿದೆ ಎಂದು ಆರೋಪಿಸಿದರು. ಕಳೆದ ವರ್ಷವೂ ಸಿಇಟಿ ಹಾಗೂ ನೀಟ್ ಪರೀಕ್ಷೆಗಳ ಸಂದರ್ಭದಲ್ಲಿ ಜನಿವಾರ ಕತ್ತರಿಸುವುದು, ಕೆಪಿಎಸ್ಸಿ ಪರೀಕ್ಷೆಯಲ್ಲಿ ಮಹಿಳೆಯರಿಂದ ಮಾಂಗಲ್ಯ ತೆಗೆಸಿದ ಘಟನೆಗಳನ್ನು ಉಲ್ಲೇಖಿಸಿ, ಇದೇ ಧೋರಣೆ ಈ ವರ್ಷವೂ ಮುಂದುವರಿದಿದೆ ಎಂದು ಹೇಳಿದರು.

ಬೆಂಗಳೂರು ಕೋರಮಂಗಲದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗೆ ಜನಿವಾರ ತೆಗೆಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಿರುವ ಅವರು, ಇದು ಹಿಂದೂ ಸಮಾಜದ ನಂಬಿಕೆಗಳಿಗೆ ಧಕ್ಕೆ ತರುವ ಕ್ರಮ ಎಂದು ಟೀಕಿಸಿದರು. ಪರೀಕ್ಷಾ ಮಾರ್ಗಸೂಚಿಗಳಲ್ಲಿ ಜನಿವಾರ ಧರಿಸಬಾರದು ಎಂಬ ಯಾವುದೇ ಉಲ್ಲೇಖ ಇಲ್ಲದಿದ್ದರೂ ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು.

ಸಂವಿಧಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿಯ ಧಾರ್ಮಿಕ ಸ್ವಾತಂತ್ರ್ಯ ಹರಣವಾಗಿರುವುದು ಕಾಣುತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಹಿಜಾಬ್ ವಿಚಾರದಲ್ಲಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ ಅವರು, ಸಮಾನ ವಸ್ತ್ರಸಂಹಿತೆ ಕುರಿತು ನ್ಯಾಯಾಲಯ ಆದೇಶ ನೀಡಿದ ಸಂದರ್ಭಗಳಲ್ಲಿ ಕಾಂಗ್ರೆಸ್ ನಾಯಕರು ಹಿಜಾಬ್ ಪರವಾಗಿ ಮಾತನಾಡಿದ್ದರೂ, ಈಗ ಜನಿವಾರ ವಿಚಾರದಲ್ಲಿ ಮೌನ ವಹಿಸಿದ್ದಾರೆ ಎಂದು ಆರೋಪಿಸಿದರು.

ಇದಲ್ಲದೆ, ರಂಜಾನ್ ಸಂದರ್ಭದಲ್ಲಿ ಶಾಲಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಸರ್ಕಾರ, ಇನ್ನೊಂದೆಡೆ ಪರೀಕ್ಷಾ ತಪಾಸಣೆ ಹೆಸರಿನಲ್ಲಿ ಮಾಂಗಲ್ಯ ಹಾಗೂ ಜನಿವಾರ ತೆಗೆಸಲು ಅವಕಾಶ ನೀಡುತ್ತಿದೆ ಎಂದು ಅವರು ಟೀಕಿಸಿದರು.

ಹಿಂದೂ ಸಂಪ್ರದಾಯಗಳನ್ನು ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿರುವ ಆರ್. ಅಶೋಕ್, ಮುಂದಿನ ದಿನಗಳಲ್ಲಿ ಸಂಘಟಿತ ಹಿಂದೂ ಸಮಾಜ ಇದಕ್ಕೆ ಉತ್ತರ ನೀಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande