ಹಿಂದುಳಿದ ವರ್ಗಗಳ ಇಲಾಖೆ ; ಶೇ. 98.25 ಫಲಿತಾಂಶ
ಅಭಿನಂದಿಸಿದ್ದಾರೆ
ಹಿಂದುಳಿದ ವರ್ಗಗಳ ಇಲಾಖೆ ; ಶೇ. 98.25 ಫಲಿತಾಂಶ


ಕೊಪ್ಪಳ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್ 23ರಂದು ಪ್ರಕಟಗೊಂಡಿದ್ದು, ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ವಸತಿ ನಿಲಯಗಳ ವಿದ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಇಲಾಖೆಗೆ ಕೀರ್ತಿ ತಂದಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಒಟ್ಟು 42 ವಸತಿ ನಿಲಯಗಳ ಪೈಕಿ 33 ವಸತಿ ನಿಲಯಗಳು ಶೇ. 100 ರಷ್ಟು ಫಲಿತಾಂಶ ದಾಖಲಿಸಿರುವುದು ವಿಶೇಷವಾಗಿದೆ. ಒಟ್ಟು 628 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 617 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಒಟ್ಟಾರೆ ಶೇ. 98.25 ರಷ್ಟು ಭರ್ಜರಿ ಫಲಿತಾಂಶ ದಾಖಲಾಗಿದೆ. ಕೇವಲ 11 ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾಗುವುದಷ್ಟೇ ಅಲ್ಲದೆ, ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, 20 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. 112 ವಿದ್ಯಾರ್ಥಿಗಳು ಶೇಕಡಾ 70ಕ್ಕಿಂತ ಹೆಚ್ಚು ಅಂಕ, 134 ವಿದ್ಯಾರ್ಥಿಗಳು ಶೇಕಡಾ 80 ಕ್ಕಿಂತ ಹೆಚ್ಚು ಅಂಕ, 139 ವಿದ್ಯಾರ್ಥಿಗಳು ಶೇಕಡಾ 60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ. ಅದೇ ರೀತಿ 124 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಮತ್ತು 88 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಒಟ್ಟು 617 ವಿದ್ಯಾರ್ಥಿಗಳು ಉತ್ತೀರ್ಣರಾದರೆ, ``ವಸತಿ ನಿಲಯಗಳಲ್ಲಿ ನೀಡಲಾದ ಪೂರಕ ಶಿಕ್ಷಣ, ನಿರಂತರ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದಾಗಿ ಈ ಸಾಧನೆ ಸಾಧ್ಯವಾಗಿದೆ. ಶೇ. 100 ರಷ್ಟು ಫಲಿತಾಂಶ ತಂದ 33 ವಸತಿ ನಿಲಯಗಳ ಸಿಬ್ಬಂದಿ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಅಭಿನಂದಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande