
ಕೋಲಾರ, ೨೪ ಏಪ್ರಿಲ್ (ಹಿ.ಸ) :
ಆ್ಯಂಕರ್ : ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಪಂಚಾಯತಿ ಮಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗದೆ, ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು. ತಾಲ್ಲೂಕಿನ ಬಹುತೇಕ ಗ್ರಾಮಗಳಿಗೆ ಖುದ್ದು ಭೇಟಿ ನೀಡಿರುವುದಾಗಿ ತಿಳಿಸಿದ ಅವರು, ಅಲ್ಲಿನ ಮೂಲಭೂತ ಸಮಸ್ಯೆಗಳನ್ನು ಹತ್ತಿರದಿಂದ ಗಮನಿಸಿದ್ದೇನೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ತಿಳಿಸಿದರು.
ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ, ರಾಯಲ್ಪಡು, ನೆಲವಂಕಿ ಮತ್ತು ಲಕ್ಷ್ಮೀಪುರ, ತಾಡಿಗೋಳ್ ಕ್ರಾಸ್ ಪಂಚಾಯತಿಗಳಲ್ಲಿ ಸ್ವಚ್ಚತಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮಗಳಲ್ಲಿ ಕಂಡುಬAದ ಸಮಸ್ಯೆಗಳ ಕುರಿತು ಈಗಾಗಲೇ ಸಂಬ0ಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಹಳ್ಳಿಯ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಮತ್ತು ಆಡಳಿತ ಯಂತ್ರವು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು. ಒಂದು ವೇಳೆ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿ, ಮುಂದಿನ ದಿನಗಳಲ್ಲಿ ಸಮಸ್ಯೆಗಳು ಮರುಕಳಿಸಿದರೆ ಅದಕ್ಕೆ ಆಯಾ ಭಾಗದ ಸಿಬ್ಬಂದಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.
ಕೋಲಾರ ಜಿಲ್ಲಾ ಪಂಚಾಯತ್ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯಾದ ಡಾ.ಪ್ರವೀಣ್ ಪಿ. ಬಾಗೇವಾಡಿ, ಸರ್ಕಾರದ ಜೊತೆಗೆ ಸಾರ್ವಜನಿಕರು ಭಾಗಿಯಾದಾಗ ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ. ಇದೇ ಮೊದಲ ಬಾರಿಗೆ ಕೋಲಾರ ಜಿಲ್ಲೆ ಗ್ರಾಮಪಂಚಾಯತಿಗಳು ತೆರಿಗೆ ಸಂಗ್ರಹಣೆಯಲ್ಲಿ ಶೇ.೧೦೦ ರಷ್ಟು ಪ್ರಗತಿ ಸಾಧಿಸಲಾಗಿದೆ. ಅಲ್ಲದೆ ನರೇಗಾ ಯೋಜನೆಯಡಿಯಲ್ಲಿ ಕೋಲಾರ ಜಿಲ್ಲೆ ೧೦೦% ಮಾನವ ದಿನಗಳ ಪ್ರಗತಿ ಸಾಧಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಪ್ರತಿ ಗ್ರಾಮಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ. ಗ್ರಾಮಗಳಲ್ಲಿ ಸ್ವಚ್ಚತಾ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಪ್ರತಿ ಸ್ವಚ್ಛತಾ ವಾಹಿನಿಗೆ ಜಿಪಿಎ ಸ್ಟ್ರ್ಯಾಕರ್ ಅಳವಡಿಸಿದ್ದು, ಕಚೇರಿಯಲ್ಲೇ ಕುಳಿತು, ಕಸ ಸಂಗ್ರಹಣೆಯನ್ನು ನಿರ್ವಹಣೆ ಮಾಡಲಾಗುತ್ತಿದೆ. ಕಸ ಸಂಗ್ರಹಕ್ಕೆ ನಿರ್ಲಕ್ಷ್ಯ ವಹಿಸುವ ಆಧಿಕಾರಿಗಳ ವಿರದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸರ್ವೇಶ್, ಪ್ರತಿದಿನ ಗ್ರಾಮಗಳಲ್ಲಿ ಕಸ ಸಂಗ್ರಹಣೆ ಮಾಡಬೇಕು. ಜೊತೆಗೆ ಶುದ್ಧ ಕುಡಿಯುವ ನೀರನ್ನು ಎಲ್ಲಾರಿಗೂ ಕಲ್ಪಿಸುವ ಉದ್ದೇಶದಿಂದ ಪ್ರತಿ ಗ್ರಾಮಕ್ಕೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಮಾಡಲಾಗಿದೆ. ಹಾಗೂ ಚರಂಡಿಗಳ ಸ್ಚಚ್ಚತೆಗಾಗಿ ಇಂಗು ಗುಂಡಿಗಳನ್ನು ಎಲ್ಲಾ ಗ್ರಾಮಗಳಲ್ಲಿ ಕಾರ್ಯಗತಗೊಳಿಸಲಾಗಿದೆ. ಗ್ರಾಮಗಳ ಅಭಿವೃದ್ಧಿಗಾಗಿ ಗ್ರಾ.ಪಂಗಳಲ್ಲಿ ಶೇಕಡಾ೧೦೦% ತೆರಿಗೆ ವಸೂಲಾತಿ ಮಾಡಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ವಿವಿಧ ಗ್ರಾಮಪಂಚಾಯತಿಗಳ ವ್ಯಾಪ್ತಿಯ ರಸ್ತೆ, ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಚತೆ ಕೈಗೊಂಡು, ಸಾರ್ವಜನಿಕರಿಗೆ ವ್ಯಾಪ್ಯಾರಿಗಳಿಗೆ ಸ್ವಚ್ಚತೆ ಕಾಪಾಲು ಅರಿವು ಮೂಡಿಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ, ಜಿ.ಪಂ ಉಪಕಾರ್ಯದರ್ಶಿಗಳಾದ ಟಿ.ಕೆ ರಮೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ನರೇಗಾ ಸಿಬ್ಬಂದಿ, ವಿವಿಧ ಗ್ರಾಮ ಪಂಚಾಯತಿಗಳ ಸಿಬ್ಬಂದಿ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್