ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ ; ಕಾಮಗಾರಿಗಳ ಪರಿಶೀಲನೆ
ಶಿವಮೊಗ್ಗ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನ
Visit


ಶಿವಮೊಗ್ಗ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಿದರು.

ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು, ಮೂಲಭೂತ ಸೌಲಭ್ಯಗಳು, ಪಾರ್ಕಿಂಗ್ ಇತರೆ ವ್ಯವಸ್ಥೆಗಳ ಕುರಿತಾದ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ವೀಕ್ಷಣಾ ಗೋಪುರ, ಪ್ರವೇಶದ್ವಾರ ಮತ್ತು ಇತರೆ ಕಾಮಗಾರಿಗಳನ್ನು ವೀಕ್ಷಿಸಿ, ಪರಿಶೀಲನೆ ನಡೆಸಿದರು.

ಪ್ರವಾಸೋದ್ಯಮ ಇಲಾಖೆ, ಕೆಪಿಟಿಸಿಎಲ್ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ವೇಳೆ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande