ಪವನ್ ಖೇರಾ ಜಾಮೀನು ಅರ್ಜಿ ಕುರಿತು ಇಂದು ಗುವಾಹಟಿ ಹೈಕೋರ್ಟ್ ತೀರ್ಪು
ಗುವಾಹಟಿ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಜಾಮೀನು ಅರ್ಜಿಯ ಕುರಿತು ಗುವಾಹಟಿ ಹೈಕೋರ್ಟ್ ಇಂದು ತನ್ನ ತೀರ್ಪನ್ನು ಪ್ರಕಟಿಸಲಿದೆ. ನ್ಯಾಯಮೂರ್ತಿ ಪಾರ್ಥಿವ್ ಜ್ಯೋತಿ ಸೈಕಿಯಾ ಅವರ ಏಕಸದಸ್ಯ ಪೀಠದಲ್ಲಿ ಈ ಪ್ರಕರಣದ ತೀರ್ಪು ಹೊರಬೀಳಲಿದೆ. ಏಪ್ರಿಲ್ 21ರಂದು ನಡೆದ ವ
ಪವನ್ ಖೇರಾ


ಗುವಾಹಟಿ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಜಾಮೀನು ಅರ್ಜಿಯ ಕುರಿತು ಗುವಾಹಟಿ ಹೈಕೋರ್ಟ್ ಇಂದು ತನ್ನ ತೀರ್ಪನ್ನು ಪ್ರಕಟಿಸಲಿದೆ. ನ್ಯಾಯಮೂರ್ತಿ ಪಾರ್ಥಿವ್ ಜ್ಯೋತಿ ಸೈಕಿಯಾ ಅವರ ಏಕಸದಸ್ಯ ಪೀಠದಲ್ಲಿ ಈ ಪ್ರಕರಣದ ತೀರ್ಪು ಹೊರಬೀಳಲಿದೆ.

ಏಪ್ರಿಲ್ 21ರಂದು ನಡೆದ ವಿಚಾರಣೆಯಲ್ಲಿ ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ನಂತರ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಇಂದು ಅಂತಿಮ ನಿರ್ಧಾರ ಪ್ರಕಟವಾಗಲಿದೆ.

ಈ ಪ್ರಕರಣವು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿಂಕಿ ಭುಯಾನ್ ಶರ್ಮಾ ವಿರುದ್ಧ ಪವನ್ ಖೇರಾ ಮಾಡಿದ ಆರೋಪಗಳಿಗೆ ಸಂಬಂಧಿಸಿದೆ. ವ್ಯೋಮಿಂಗ್ ಮೂಲದ ಅಮೆರಿಕನ್ ಕಂಪನಿಯೊಂದರೊಂದಿಗೆ ಅವರ ಸಂಪರ್ಕವಿದೆ ಎಂದು ಖೇರಾ ಆರೋಪಿಸಿದ್ದರು. ಜೊತೆಗೆ ಮುಖ್ಯಮಂತ್ರಿ ಶರ್ಮಾ ಹಾಗೂ ಅವರ ಕುಟುಂಬದ ವಿರುದ್ಧ ಭಾರಿ ಹಣಕಾಸು ಅಕ್ರಮಗಳು ನಡೆದಿವೆ ಎಂಬ ಆರೋಪವೂ ಕೇಳಿ ಬಂದಿತ್ತು.

ಆದರೆ ಈ ಎಲ್ಲ ಆರೋಪಗಳನ್ನು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನಿರಾಕರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande