
ಬೆಂಗಳೂರು, 24 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಗಾಂಧಿನಗರ ವಿಧಾನಸಭಾ ಕ್ಷೇತ್ರದ ಓಕಲಿಪುರಂ ವಾರ್ಡ್ನಲ್ಲಿ ನಡೆಯುತ್ತಿರುವ ಬೃಹತ್ ನೀರುಗಾಲುವೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸ್ಥಳೀಯ ನಾಗರಿಕರೊಂದಿಗೆ ಸಮಾಲೋಚನೆ ನಡೆಸಿ ಅವರ ಸಲಹೆಗಳನ್ನು ಪಡೆದುಕೊಂಡರು. ನೀರು ಬಿಡುವ ಸಮಯದಲ್ಲಿ ಉಂಟಾಗುತ್ತಿರುವ ಸ್ವಲ್ಪ ವ್ಯತ್ಯಾಸದಿಂದ ಅಡಚಣೆ ಉಂಟಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ವ್ಯಕ್ತವಾದವು.
ಕಾಮಗಾರಿ ಪೂರ್ಣಗೊಂಡ ನಂತರ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು. ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಕಾಯ್ದುಕೊಂಡು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಜಲಮಂಡಳಿ ಅಧಿಕಾರಿಗಳು ಪ್ರತಿದಿನ ಪರಿಸ್ಥಿತಿಯನ್ನು ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa