ರಾಜ್ ಕುಮಾರ್ ಬದ್ದತೆಗೆ ಅವರೇ ಸಾಟಿ : ಸಿದ್ದರಾಮಯ್ಯ
ಬೆಂಗಳೂರು, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟನಾಗಿ, ಗಾಯಕನಾಗಿ ಮಾತ್ರವಲ್ಲ ಕನ್ನಡ ನಾಡು, ನುಡಿಯ ಬಗೆಗೆ ರಾಜ್‌ ಕುಮಾರ್ ಅವರಿಗಿದ್ದ ಪ್ರೀತಿ - ಬದ್ಧತೆಗೆ ಅವರೇ ಸಾಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್‌ ಕುಮಾರ್ ಜನ್ಮದಿನದ ಅಂಗವಾಗಿ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹ
Cm wishes


ಬೆಂಗಳೂರು, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನಟನಾಗಿ, ಗಾಯಕನಾಗಿ ಮಾತ್ರವಲ್ಲ ಕನ್ನಡ ನಾಡು, ನುಡಿಯ ಬಗೆಗೆ ರಾಜ್‌ ಕುಮಾರ್ ಅವರಿಗಿದ್ದ ಪ್ರೀತಿ - ಬದ್ಧತೆಗೆ ಅವರೇ ಸಾಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್‌ ಕುಮಾರ್ ಜನ್ಮದಿನದ ಅಂಗವಾಗಿ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ರಾಜ್‌ ಕುಮಾರ್ ಎಂದಾಕ್ಷಣ ತಟ್ಟನೆ ನೆನಪಾಗುವುದು ಅವರ ಸರಳತೆ, ಸಜ್ಜನಿಕೆ, ಅಕ್ಕರೆಯ ಮಾತುಗಳು. ಯಶಸ್ಸು, ಖ್ಯಾತಿ, ಸಂಪತ್ತು ಈ ಎಲ್ಲವೂ ಯಥೇಚ್ಛವಾಗಿ ಬಂದರೂ ರಾಜಣ್ಣನ ವ್ಯಕ್ತಿತ್ವ ಮಾತ್ರ ಬದಲಾಗಲಿಲ್ಲ, ಅವರು ಸಮಾಜಕ್ಕೆ ಮತ್ತಷ್ಟು ಹತ್ತಿರವಾಗುತ್ತಾ ಹೋದರು, ಸುತ್ತಲಿನ ಜನರನ್ನು ಹೆಚ್ಚು ಪ್ರೀತಿಸಲಾರಂಭಿಸಿದರು ಎಂದಿದ್ದಾರೆ.

ನಾಯಕ, ಖಳನಾಯಕ, ಪೋಷಕ ಹೀಗೆ ಪ್ರತಿಯೊಂದು ಪಾತ್ರಕ್ಕೂ ಜೀವತುಂಬುತ್ತಿದ್ದ ಅವರು ತಮ್ಮ ಅತ್ಯದ್ಭುತ ನಟನೆ, ಸುಮಧುರ ಕಂಠಸಿರಿಯ ಮೂಲಕ ಹಲವು ದಶಕಗಳ ಕಾಲ ಕನ್ನಡದ ಸಿನಿಪ್ರಿಯರನ್ನು ರಂಜಿಸಿದವರು.

ನಡೆ - ನುಡಿಯಲ್ಲೂ ರಾಜ್‌ ಕುಮಾರ್ ನಾಗಿ ಬಾಳಿದ ಮಹಾನ್ ಚೇತನಕ್ಕೆ ನನ್ನ ಅಭಿಮಾನಪೂರ್ವಕ ನಮನಗಳು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande