ಮಧ್ಯರಾತ್ರಿ ಮರ ಅಕ್ರಮ ಕಟಾವು ; ಅಧಿಕಾರಿಗಳ ಮೇಲೆ ಹಲ್ಲೆ, ಮೊಬೈಲ್ ಜಪ್ತಿ
ಬಳ್ಳಾರಿ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ವಿದ್ಯಾನಗರ ವೃತ್ತದಿಂದ ಕೊಳಗಲ್ಲು ರಸ್ತೆಯವರೆಗೆ ರಸ್ತೆ ಅಗಲೀಕರಣದ ನೆಪದಲ್ಲಿ ಅಕ್ರಮವಾಗಿ ಮರಗಳನ್ನು ಕಟಾವು ಮಾಡುತ್ತಿದ್ದ ರಸ್ತೆ ಅಗಲೀಕರಣ ಗುತ್ತಿಗೆದಾರ ಹಾಗೂ ಆತನ ನಾಲ್ವರು ಸಹಚರರ ವಿರುದ್ಧ ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಅರಣ್ಯ ಅಧಿ
ಮಧ್ಯರಾತ್ರಿ ಮರ ಅಕ್ರಮ ಕಟಾವು: ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು ; ಅಧಿಕಾರಿಗಳ ಮೇಲೆ ಹಲ್ಲೆ, ಮೊಬೈಲ್ ಜಪ್ತಿ


ಮಧ್ಯರಾತ್ರಿ ಮರ ಅಕ್ರಮ ಕಟಾವು: ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು ; ಅಧಿಕಾರಿಗಳ ಮೇಲೆ ಹಲ್ಲೆ, ಮೊಬೈಲ್ ಜಪ್ತಿ


ಬಳ್ಳಾರಿ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಯ ವಿದ್ಯಾನಗರ ವೃತ್ತದಿಂದ ಕೊಳಗಲ್ಲು ರಸ್ತೆಯವರೆಗೆ ರಸ್ತೆ ಅಗಲೀಕರಣದ ನೆಪದಲ್ಲಿ ಅಕ್ರಮವಾಗಿ ಮರಗಳನ್ನು ಕಟಾವು ಮಾಡುತ್ತಿದ್ದ ರಸ್ತೆ ಅಗಲೀಕರಣ ಗುತ್ತಿಗೆದಾರ ಹಾಗೂ ಆತನ ನಾಲ್ವರು ಸಹಚರರ ವಿರುದ್ಧ ಕೌಲ್ಬಜಾರ್ ಪೊಲೀಸ್ ಠಾಣೆಯಲ್ಲಿ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಲಿಸಿದ್ದಾರೆ.

ಏಪ್ರಿಲ್ 23 ರ ಗುರುವಾರ ರಾತ್ರಿ 10:30ರ ಸುಮಾರಿಗೆ ಚೈನಾಜ್ 1.10 ಕಿ.ಮೀ ನಿಂದ 1.60 ಕಿ.ಮೀ ವರೆಗೆ ರಸ್ತೆ ಬದಿಯ ಮರಗಳನ್ನು ಅಕ್ರಮವಾಗಿ ಕಟಾವು ಮಾಡಲಾಗುತ್ತಿದೆ ಎಂಬ ದೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು.

ಆಗ, ಬಳ್ಳಾರಿ ನಗರ ಉಪ ವಲಯ ಅರಣ್ಯಾಧಿಕಾರಿ ಸುನೀಲಕುಮಾರ ಆರ್. ಚೌವ್ಹಾಣ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮರಗಳನ್ನು ಕಡಿಯುತ್ತಿದ್ದವರಲ್ಲಿ ಮರ ಕಡಿಯಲು ಅನುಮತಿ ಪತ್ರವನ್ನು ಕೇಳಲಾಯಿತು. ಆಗ, ರಸ್ತೆ ಅಗಲೀಕರಣ ಕಾಮಗಾರಿ ತುರ್ತಾಗಿ ಆಗಬೇಕಿದೆ. ಕಾರಣ ಗಿಡಗಳನ್ನು ಕಡಿಯಲಾಗುತ್ತಿದೆ ಎಂದು ಹಾರಿಕೆಯ ಉತ್ತರವನ್ನು ಗುತ್ತಿಗೆದಾರರು ನೀಡಿದ್ದಾರೆ.

ಮರಗಳನ್ನು ಅಕ್ರಮವಾಗಿ ಕಡಿಯುತ್ತಿರುವುದನ್ನು ಅರಣ್ಯ ಅಧಿಕಾರಿಗಳು ತಡೆಯಲು ಪ್ರಯತ್ನಿಸಿದಾಗ ಗುತ್ತಿಗೆದಾರರ ಸಹಚರರಾದ ತಿಲ್ಲು ಮತ್ತು ರವಿ ಮೋಕಾ ಅವರು ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿದು, ಕೃತ್ಯವನ್ನು ಚಿತ್ರೀಕರಿಸುತ್ತಿದ್ದ ಅಧಿಕಾರಿಯ ಮೊಬೈಲ್ ಫೆÇೀನ್ ಕಿತ್ತುಕೊಂಡು ನೆಲಕ್ಕೆ ಎಸೆದು ಹಾನಿಗೊಳಿಸಿದ್ದಾರೆ. ಕೌಲ್ಬಜಾರ್ ಪೆÇಲೀಸರ ನೆರವಿನೊಂದಿಗೆ ಮರ ಕಟಾವನ್ನು ನಿಲ್ಲಿಸಲಾಗಿದೆ.

ಈ ಕುರಿತು ಪ್ರಕರಣ ದಾಖಲಾಗಿದ್ದು, ಸ್ಥಳ ಪರಿಶೀಲನೆಯಲ್ಲಿ ಒಟ್ಟು 25 ಮರಗಳನ್ನು (21 ತಪಸಿ, 02 ಬೇವು, 02 ಅರಳಿ) ಅಕ್ರಮವಾಗಿ ಕಟಾವು ಮಾಡಿರುವುದು ಪತ್ತೆಯಾಗಿದೆ. ಅಂದಾಜು 5 ಟನ್ ಸೌದೆಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಕರ್ನಾಟಕ ಅರಣ್ಯ ಕಾಯ್ದೆ 1963 ಮತ್ತು ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ 1976 ರ ಅಡಿಯಲ್ಲಿ ಎನ್.ಸಿ ನಂ 01/2026-27 ರಂತೆ ಪ್ರಕರಣ ದಾಖಲಾಗಿದೆ.

ನ್ಯಾಯಾಲಯದ ಅನುಮತಿ ಪಡೆದು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರಂತೆ ಶ್ರೀನಿವಾಸ್ (ಶ್ರೀನಿವಾಸ್ ಇನ್ಫ್ರಾಪ್ರಾಜೆಕ್ಟ್ ಪ್ರೈ.ಲಿ) ಮತ್ತು ಇತರ ನಾಲ್ವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ.

ರಸ್ತೆ ಕಾಮಗಾರಿಗಾಗಿ ಕೊಳಗಲ್ಲು ರಸ್ತೆಯಲ್ಲಿ ಒಟ್ಟು 233 ಮರಗಳ ಕಟಾವಿಗೆ ಲೋಕೋಪಯೋಗಿ ಇಲಾಖೆ ಅನುಮತಿ ಕೋರಿತ್ತು. ಆದರೆ, ಪರಿಸರ ಸಂರಕ್ಷಣೆ ದೃಷ್ಟಿಯಿಂದ 139 ಮರಗಳನ್ನು ಉಳಿಸಿಕೊಂಡು ಫುಟ್ಪಾತ್ ವಿನ್ಯಾಸ ಬದಲಿಸುವಂತೆ ಅರಣ್ಯ ಇಲಾಖೆಯು ಮಾರ್ಚ್ 23ರಂದೇ ಪತ್ರ ಬರೆದಿತ್ತು. ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಗುತ್ತಿಗೆದಾರರು, ಏಕಾಏಕಿ ತಡರಾತ್ರಿ ಈ ದುಷ್ಕøತ್ಯ ಎಸಗಿದ್ದಾರೆ.

ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ 1976 ರ ಪ್ರಕಾರ 50ಕ್ಕೂ ಹೆಚ್ಚು ಮರಗಳ ಕಟಾವಿಗೆ ಸಾರ್ವಜನಿಕ ಆಕ್ಷೇಪಣೆ ಪಡೆಯುವುದು ಕಡ್ಡಾಯ. ಯಾವುದೇ ಆಕ್ಷೇಪಣೆ ಇಲ್ಲದಿದ್ದಲ್ಲಿ ರಸ್ತೆ ಅಗಲೀಕರಣದ ನಂತರ ಗಿಡಗಳನ್ನೂ ನೆಡಲು ಅನ್ವಯಿಸುವ ಶುಲ್ಕಗಳನ್ನು ಪಾವತಿಸಿಕೊಂಡು ಅನುಮತಿ ನೀಡಲು ಕ್ರಮವಹಿಸಬೇಕಾಗಿರುತ್ತದೆ. ಆದರೆ ಕಾನೂನು ಗಾಳಿಗೆ ತೂರಿ ಈ ಕೃತ್ಯ ಎಸಗಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಯ ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande