
ಧಾರವಾಡ, 24 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ ಗುಂಡೂರಾವ್ ಅವರು ಏಪ್ರೀಲ್ 27 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಏಪ್ರೀಲ್ 27, 2026 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಗಳ ಕಚೇರಿ ಆವರಣದಲ್ಲಿರುವ ಲಸಿಕಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ 10:30 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಸಮಗ್ರ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ 11:30 ಗಂಟೆಗೆ ಧಾರವಾಡ ತಾಲೂಕಿನ ಅಮ್ಮಿನಭಾವಿಯ ಸರ್ಕಾರಿ ಆರೋಗ್ಯ ಕೇಂದ್ರ ಆವರಣದಲ್ಲಿ ಅಮ್ಮಿನಭಾವಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 2:30 ಗಂಟೆಗೆ ಕುಂದಗೋಳ ತಾಲೂಕಿನ ಇಂಗಳಗಿ ಗ್ರಾಮದಲ್ಲಿನ ಇಂಗಳಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa