
ಕೊಪ್ಪಳ, 24 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಏಪ್ರಿಲ್ 23ರಂದು ಪ್ರಕಟವಾದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಇಲಾಖೆಯ ಅಡಿಯಲ್ಲಿ ಬರುವ 2 ವಸತಿ ನಿಲಯಗಳ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಶೈಕ್ಷಣಿಕ ಗುಣಮಟ್ಟವನ್ನು ಎತ್ತಿ ಹಿಡಿದಿದ್ದಾರೆ.
ಪರೀಕ್ಷೆಗೆ ಒಟ್ಟು 21 ವಿದ್ಯಾರ್ಥಿಗಳು ಹಾಜರಾಗಿದ್ದು, ಅವರಲ್ಲಿ 18 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಕೇವಲ 3 ವಿದ್ಯಾರ್ಥಿಗಳು ಫಲಿತಾಂಶದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ, 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಸೇರಿದಂತೆ ಒಟ್ಟು 18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್