ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಪ್ರೀತಿ ಎಸ್. ಪಾಟೀಲಗೆ ಪಿಎಚ್.ಡಿ
ಧಾರವಾಡ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಶ್ವವಿದ್ಯಾಲಯದ 75ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶ್ರೀಮತಿ ಪ್ರೀತಿ ಎಸ್. ಪಾಟೀಲ (ಕುಸುಗಲ್ಲ) ಅವರಿಗೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಪಿಎಚ್‌.ಡಿ ಪದವಿ ಪ್ರದಾನಿಸಲಾಯಿತು. ಈ ಪದವಿಯನ್ನು ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ
Preeti S. Patil gets PhD


ಧಾರವಾಡ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಶ್ವವಿದ್ಯಾಲಯದ 75ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶ್ರೀಮತಿ ಪ್ರೀತಿ ಎಸ್. ಪಾಟೀಲ (ಕುಸುಗಲ್ಲ) ಅವರಿಗೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಪಿಎಚ್‌.ಡಿ ಪದವಿ ಪ್ರದಾನಿಸಲಾಯಿತು.

ಈ ಪದವಿಯನ್ನು ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವರು ಮತ್ತು ಸಮಕುಲಾಧಿಪತಿಗಳಾದ ಡಾ. ಎಂ. ಪಿ. ಸುಧಾಕರ್ ಅವರು ಪ್ರದಾನಿಸಿದರು.

ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರು ಹಾಗೂ ಇಸ್ರೋ ಮಾಜಿ ಅಧ್ಯಕ್ಷರಾದ ಡಾ. ಎ. ಎಸ್. ಕಿರಣ್ ಕುಮಾರ್, ಕುಲಪತಿಗಳಾದ ಪ್ರೊ. ಎ. ಎಂ. ಖಾನ್, ಕುಲಸಚಿವರಾದ ಡಾ. ಶಂಕರ ವಣಿಕ್ಯಾಳ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ನಿಜಲಿಂಗಪ್ಪ ಮಟ್ಟಿಹಾಳ ಸೇರಿದಂತೆ ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande