ವಸತಿ ನಿಲಯಗಳಲ್ಲಿ ಎಸ್.ಎಸ್.ಎಲ್.ಸಿ ; `ಸ್ಪೂರ್ತಿಯ ನಡೆ' ಭರ್ಜರಿ ಯಶಸ್ಸು
ಬಳ್ಳಾರಿ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾದ ಸ್ಪೂರ್ತಿಯ ನಡೆ ಕಾರ್ಯಕ್ರಮಕ್ಕೆ ಭರ್ಜರಿ ಯಶಸ್ಸು ದೊರೆತಿದ್ದು, ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷ
ವಸತಿ ನಿಲಯಗಳಲ್ಲಿ ಎಸ್.ಎಸ್.ಎಲ್.ಸಿ ; `ಸ್ಪೂರ್ತಿಯ ನಡೆ' ಭರ್ಜರಿ ಯಶಸ್ಸು


ಬಳ್ಳಾರಿ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾದ ಸ್ಪೂರ್ತಿಯ ನಡೆ ಕಾರ್ಯಕ್ರಮಕ್ಕೆ ಭರ್ಜರಿ ಯಶಸ್ಸು ದೊರೆತಿದ್ದು, ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇತಿಹಾಸ ನಿರ್ಮಿಸಿದ್ದಾರೆ.

ಕಳೆದ ವರ್ಷ ಕೇವಲ ಶೇ. 52.00 ರಷ್ಟಿದ್ದ ಫಲಿತಾಂಶವು ಈ ಬಾರಿ ಅಚ್ಚರಿಯ ರೀತಿಯಲ್ಲಿ ಶೇ. 93.40 ಕ್ಕೆ ಜಿಗಿಯುವ ಮೂಲಕ ಜಿಲ್ಲೆಯ ಶೈಕ್ಷಣಿಕ ವಲಯದಲ್ಲಿ ಸ್ಪೂರ್ತಿಯ ನಡೆ ಕಾರ್ಯಕ್ರಮವು ಹೊಸ ಸಂಚಲನ ಮೂಡಿಸಿದೆ.

ಈ ಭವ್ಯ ಸಾಧನೆಯ ಹಿಂದೆ ಜಿಲ್ಲಾಧಿಕಾರಿಗಳ ಪರಿಕಲ್ಪನೆಯಾದ ಸ್ಪೂರ್ತಿಯ ನಡೆ ಎಂಬ ವಿನೂತನ ಕಾರ್ಯಕ್ರಮವು ಪ್ರಮುಖ ಪಾತ್ರ ವಹಿಸಿದೆ. ಹಿಂದುಳಿದ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಜಾರಿಗೆ ತರಲಾದ ಈ ಯೋಜನೆಯು ಇಂದು ಫಲಪ್ರದವಾಗಿದೆ.

ಯಶಸ್ಸಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರ ಪ್ರೋತ್ಸಾಹ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಸೂಕ್ತ ಮಾರ್ಗದರ್ಶನವೇ ಅಡಿಪಾಯವಾಗಿದೆ. ವಿಶೇಷವಾಗಿ ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳು ಸುಮಾರು 60 ದಿನಗಳ ಕಾಲ ಪ್ರತಿದಿನ ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಸಿದ ವಿಶೇಷ ತರಗತಿಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿವೆ. ಈ ಆನ್ಲೈನ್ ತರಗತಿಗಳನ್ನು ಯಶಸ್ವಿಯಾಗಿ ಆಯೋಜಿಸಿದ ಎನ್.ಐ.ಸಿ ತಂಡದ ತಾಂತ್ರಿಕ ಬೆಂಬಲವೂ ಶ್ಲಾಘನೀಯವಾಗಿದೆ.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 803 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 750 ಉತ್ತೀರ್ಣರಾಗಿದ್ದಾರೆ. 47 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. 340 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 202 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ, 161 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಸೇರಿದಂತೆ ಒಟ್ಟು ಫಲಿತಾಂಶದ ಶೇಕಡಾವಾರು 93.40% ಉತ್ತೀರ್ಣರಾದರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande