ಏ.26 ರಂದು `ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2’
ಸಂಡೂರು, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏ.26 ರಂದು ಬೆಳಿಗ್ಗೆ 10 ಗಂಟೆಗೆ ಸಂಡೂರು ತಾಲ್ಲೂಕಿನ ತಾಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಂಡೂರು ಸಂಕಲ್ಪ ಸಮರ್ಪಣಾ
ಏ.26 ರಂದು `ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2’


ಸಂಡೂರು, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏ.26 ರಂದು ಬೆಳಿಗ್ಗೆ 10 ಗಂಟೆಗೆ ಸಂಡೂರು ತಾಲ್ಲೂಕಿನ ತಾಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2 ನಡೆಯಲಿದೆ. ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಘನ ಉಪಸ್ಥಿತಿ ಇರುವರು.

ಸಂಡೂರು ವಿಧಾನ ಸಭೆ ಕ್ಷೇತ್ರದ ಶಾಸಕರಾದ ಈ.ಅನ್ನಪೂರ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಪರಿಷತ್ ಶಾಸಕರಾದ ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷ್ಮಣ, ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಷಯ ಲಾಡ್, ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್.ಎಸ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande