ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಸಿದ್ರಾಮೇಶ್ವರ
ಕೊಪ್ಪಳ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶ್ರೀ ಹೇಮರೆಡ್ಡಿ ಮಲ್ಲಮ್ಮ ಜ
ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ- ಸಿದ್ಧತೆ - ಸಿದ್ರಾಮೇಶ್ವರ


ಕೊಪ್ಪಳ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕುರಿತು ಕೊಪ್ಪಳ ಜಿಲ್ಲಾಡಳಿತ ಭವನದ ಕೆಸ್ವಾನ್-2ರ ಸಭಾಂಗಣದಲ್ಲಿ ಶುಕ್ರವಾರ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಮೇ 10ರಂದು ಆಚರಣೆ ಮಾಡಲಾಗುವುದು. ಜಯಂತಿ ದಿನದಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳು, ತಾಲ್ಲೂಕು ಕೇಂದ್ರಗಳಲ್ಲಿ ಮತ್ತು ತಾಲ್ಲೂಕಾ ಕಛೇರಿ, ಗ್ರಾಮ ಪಂಚಾಯತಗಳಲ್ಲಿ, ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕಾಗಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಕೇಂದ್ರದಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಗಾಗಿ ಸಂಬಂಧಿಸಿದ ಇಲಾಖೆಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಮೇ 10ರ ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿರುವ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪೂಜೆ, ಶ್ರೀ ಹೇಮರೆಡ್ಡಿ ಮಲ್ಲಮ್ಮ ರವರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದೆ. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಎಲ್ಲಾ ಸಮಾಜದವರು ಅನುಕೂಲ ಮಾಡಿಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣ ಕುಮಾರ್, ಸಮಾಜದ ಮುಖಂಡರಾದ ವಿರುಪಣ್ಣ ನವೋದಯ, ಹನಮರೆಡ್ಡಿ ಹಂಗನಕಟ್ಟಿ, ಕಾಶೀನಾಥರೆಡ್ಡಿ, ಹನಮರೆಡ್ಡಿ, ಹೇಮರೆಡ್ಡಿ, ಸಂಜೀವರೆಡ್ಡಿ ಛಪ್ಪರದ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande