ಮಲ್ಲಿಕಾರ್ಜುನ ಖರ್ಗೆ ಅವಹೇಳನಕಾರಿ ಹೇಳಿಕೆಗೆ ರಾಜು ಕುರುಡಗಿ ತೀವ್ರ ಖಂಡನೆ
ಗದಗ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ''ಭಯೋತ್ಪಾದಕ'' ಎಂದು ಕರೆದಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯವಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನ
ಫೋಟೋ


ಗದಗ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು 'ಭಯೋತ್ಪಾದಕ' ಎಂದು ಕರೆದಿರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯವಾಗಿದೆ.

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರಿಂದ ಇಂತಹ ತೀರಾ ಕೆಳಮಟ್ಟದ ಹೇಳಿಕೆ ಹೊರಬಂದಿರುವುದು ದುರದೃಷ್ಟಕರ.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶದ ಪ್ರಧಾನಿಯನ್ನು ಇಂತಹ ಪದಗಳಿಂದ ಸಂಬೋಧಿಸುವುದು ಕೇವಲ ವ್ಯಕ್ತಿಯೊಬ್ಬರಿಗೆ ಮಾಡಿದ ಅವಮಾನವಲ್ಲ, ಬದಲಿಗೆ ಇಡೀ ದೇಶದ ಜನಾದೇಶಕ್ಕೆ ಮಾಡಿದ ಅವಮಾನವಾಗಿದೆ.

ಸತತ ಚುನಾವಣಾ ಸೋಲುಗಳಿಂದ ಹತಾಶೆಗೊಂಡಿರುವ ಕಾಂಗ್ರೆಸ್ ಪಕ್ಷ, ಈಗ ಭಾಷೆಯ ಮೇಲಿನ ಹಿಡಿತ ಕಳೆದುಕೊಂಡು ದ್ವೇಷದ ರಾಜಕಾರಣಕ್ಕೆ ಇಳಿದಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಭಯೋತ್ಪಾದನೆಯಿಂದ ನೊಂದಿರುವ ರಾಷ್ಟ್ರದಲ್ಲಿ, ಒಬ್ಬ ಜನಪ್ರಿಯ ನಾಯಕನನ್ನು ಭಯೋತ್ಪಾದಕರಿಗೆ ಹೋಲಿಸುವುದು ಭಯೋತ್ಪಾದನೆಯ ಗಂಭೀರತೆಯನ್ನು ಕುಗ್ಗಿಸುವಂತಿದೆ.

ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರಧಾನಿಯವರ ಕುರಿತು ನೀಡಿರುವ ಈ ಬೇಜವಾಬ್ದಾರಿಯುತ ಹೇಳಿಕೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣವೇ ಹಿಂಪಡೆದು, ದೇಶದ ಕ್ಷಮೆಯಾಚಿಸಬೇಕು ಎಂದು ನಾವು ಈ ಮೂಲಕ ಆಗ್ರಹಿಸುತ್ತೇವೆ.

ರಾಜಕೀಯ ಟೀಕೆಗಳು ಸೈದ್ಧಾಂತಿಕವಾಗಿರಲಿ, ಆದರೆ ಅದು ವ್ಯಕ್ತಿ ನಿಂದನೆ ಅಥವಾ ದೇಶದ ಘನತೆಗೆ ಧಕ್ಕೆ ತರುವಂತಿರಬಾರದು ಎಂದು ನಾವು ಎಚ್ಚರಿಸುತ್ತೇವೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷರು ರಾಜು ಕುರಡಗಿ ಆಕ್ರೋಶ ವ್ಯಕ್ತಿಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande