
ಕೋಲಾರ, ೨೫ ಏಪ್ರಿಲ್ (ಹಿ.ಸ) :
ಆ್ಯಂಕರ್ : ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಮಂಗಸ0ದ್ರದ ಸುವರ್ಣ ಗಂಗೆ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರ ವಿಶ್ವವಿದ್ಯಾಲಯ ಕಾಲೇಜುಗಳಲ್ಲಿ ೨೦೨೬-೨೭ನೇ ಸಾಲಿನಲ್ಲಿ ವಿವಿಧ ಸ್ನಾತಕ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದಾರೆ.
ಮಂಗಸ0ದ್ರದ ಸ್ನಾತಕೋತ್ತರ ಕೇಂದ್ರದಲ್ಲಿ ಬಿಕಾಂ ಸಾಮಾನ್ಯ, ಬಿಸಿಎ ಡಾಟಾ ಸೈನ್ಸ್, ಬಿಎಸ್ಸಿ ಆರ್ಟಿಫಿಸಿಯಲ್ ಇಂಟಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ಬಿಬಿಎ ಡಿಜಿಟಲ್ ಮಾರ್ಕೆಂಟಿ0ಗ್ ಕೋರ್ಸುಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಚಿಕ್ಕಬಳ್ಳಾಪುರ ಸರ್ಕಾರಿ ಕಾಲೇಜಿನಲ್ಲಿ ಬಿಸಿಎ ಸೈಬರ್ ಸೆಕ್ಯೂರಿಟಿ, ಬಿಎಸ್ಸಿ ಫೋರೆನ್ಸಿಕ್ ಸೈನ್ಸ್ ಕೋರ್ಸುಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಕೋರ್ಸುಗಳೀಗೆ ಸೇರಲಿಚ್ಚಿಸುವವರು ದ್ವಿತೀಯ ಪಿಯುಸಿ ಮುಗಿಸಿರಬೇಕು ಅಥವಾ ಇದಕ್ಕೆ ಸಮಾನ ಅರ್ಹತೆ ತಾಂತ್ರಿಕ ಶಿಕ್ಷಣ ಮಂಡಳಿಯ ಡಿಪ್ಲೋಮೋ ಅಥವಾ ತತ್ಸಮಾನ ಪರೀಕ್ಷೆ ಪಾಸಾದವರೂ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್ ಸೈಟ್ಗೆ ಭೇಟಿ ನೀಡಲು ಕೋರಿದ್ದು, ಅರ್ಹ ಅಭ್ಯರ್ಥಿಗಳು ವಿವಿಯ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿರುವ ಕುಲಸಚಿವರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-೯೯೪೫೨೨೬೬೬೬, ೭೮೯೨೦೮೭೨೯೮, ೯೦೩೫೪೧೫೭೬೪ ರಲ್ಲಿ ಸಂಪರ್ಕಿಸಲು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್