ತುಮಕೂರಿನಲ್ಲಿ ಜಾನುವಾರು ರೋಗ ನಿಯಂತ್ರಣ ಅಭಿಯಾನಕ್ಕೆ ಚಾಲನೆ
ತುಮಕೂರು, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಉಚಿತ ‘ಕಾಲುಬಾಯಿ ರೋಗ’ ಲಸಿಕಾ ಕಾರ್ಯಕ್ರಮಕ್ಕೆ ಜಿ. ಪರಮೇಶ್ವರ ಚಾಲನೆ ನೀಡಿದರ
ಪರಮೇಶ್ವರ


ತುಮಕೂರು, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಉಚಿತ ‘ಕಾಲುಬಾಯಿ ರೋಗ’ ಲಸಿಕಾ ಕಾರ್ಯಕ್ರಮಕ್ಕೆ ಜಿ. ಪರಮೇಶ್ವರ ಚಾಲನೆ ನೀಡಿದರು.

ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾನುವಾರುಗಳ ಆರೋಗ್ಯ ಕಾಪಾಡುವುದು ರೈತರ ಆರ್ಥಿಕ ಸ್ಥಿರತೆಗೆ ಅತ್ಯಂತ ಮುಖ್ಯ ಎಂದು ಹೇಳಿದರು. ಈ ಹಿನ್ನೆಲೆ ಲಸಿಕಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದೇ ವೇಳೆ ಕೃಷಿ ಇಲಾಖೆಯ ವತಿಯಿಂದ ಸಮತೋಲನ ರಸಗೊಬ್ಬರ ಬಳಕೆಯ ಕುರಿತು ರೈತರಿಗೆ ಅರಿವು ಮೂಡಿಸುವ ಅಭಿಯಾನಕ್ಕೂ ಚಾಲನೆ ನೀಡಲಾಯಿತು. ಕೃಷಿ, ತೋಟಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಷಡಕ್ಷರಿ, ವಿಧಾನ ಪರಿಷತ್ ಸದಸ್ಯರು ಡಿ.ಟಿ. ಶ್ರೀನಿವಾಸ್ ಹಾಗೂ ರಮೇಶ್ ಬಾಬು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಬಿ.ವಿ. ಅಶ್ವಿಜ, ಗ್ಯಾರಂಟಿ ಯೋಜನೆಗಳ ಸಮಿತಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande