
ಬೆಂಗಳೂರು, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರದ ಮಲ್ಲೇಶ್ವರದಲ್ಲಿರುವ ಸುವರ್ಣಭವನದಲ್ಲಿ ಸಂಸದರ ಕಚೇರಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕ್ಷೇತ್ರದ ನಾಗರಿಕರ ಅಹವಾಲುಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಮಸ್ಯೆಗಳ ಕುರಿತು ನಾಗರಿಕರು ಸಲ್ಲಿಸಿದ ಮನವಿ ಪತ್ರಗಳನ್ನು ಸ್ವೀಕರಿಸಿದ ಸಚಿವರು, ಅವುಗಳಿಗೆ ತಕ್ಷಣ ಸ್ಪಂದಿಸಿ ಸಂಬಂಧಿತ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜನರ ಸಮಸ್ಯೆಗಳನ್ನು ನೇರವಾಗಿ ಕೇಳಿ ಪರಿಹರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಸ್ಥಳೀಯ ಮೂಲಸೌಕರ್ಯ, ಕುಡಿಯುವ ನೀರು, ರಸ್ತೆ, ಸ್ವಚ್ಛತೆ ಸೇರಿದಂತೆ ಹಲವು ವಿಷಯಗಳನ್ನು ನಾಗರಿಕರು ಪ್ರಸ್ತಾಪಿಸಿದರು. ಈ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa