
ಶಿವಮೊಗ್ಗ, 25 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ 2026-27 ನೇ ಸಾಲಿನ ಪ್ರಥಮ ಪಿ.ಯು.ಸಿ.ಯ ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್. ಕೋರ್ಸ್ ಗಳ ದಾಖಲಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ.
2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಸಾಮಾನ್ಯ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಏಪ್ರಿಲ್ 29 ರೊಳಗಾಗಿ ಜಾಲತಾಣ http://kreis.karnataka.gov.in ರಲ್ಲಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಯಾ ವಸತಿ ಕಾಲೇಜುಗಳಲ್ಲಿ ದಾಖಲಾತಿಯ ಸಂದರ್ಭದಲ್ಲಿ 02 ಭಾವಚಿತ್ರ, ಎಸ್.ಎಸ್.ಎಲ್.ಸಿ ಮೂಲ ಅಂಕಪಟ್ಟಿ, ಎಸ್ಎಟಿಎಸ್ ನಂಬರ್, ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಪೋಷಕರ ಮತ್ತು ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರ (ಇದ್ದಲ್ಲಿ) ಇವುಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕಾಲೇಜುಗಳ ವಿವರ ಮತ್ತು ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು-56 ಶಿವಮೊಗ್ಗ ತಾಲ್ಲೂಕು ಮೊ.ಸಂ.9739977365, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹೊಸೂರು-908 ಶಿಕಾರಿಪುರ ತಾಲ್ಲೂಕು ಮೊ. ಸಂ. 8971701958, ಅಟಲ್ ಬಿಹಾರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆವಿನಹಳ್ಳಿ-584 ಸಾಗರ ತಾಲ್ಲೂಕು ಮೊ.ಸಂ.9480767164/6363184683, ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆನವೇರಿ-57, ಭದ್ರಾವತಿ ತಾಲೂಕು-8105352698 ಸಂಪರ್ಕಿಸುವ0ತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa