ರಾಜ್ಯದಲ್ಲಿ ಬಿಸಿಲಿನ ನಡುವೆ ಗುಡುಗು ಮಳೆ ಮುನ್ಸೂಚನೆ
ಬೆಂಗಳೂರು, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣ ಹವಾಮಾನ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನ ನಂತರ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಕರ್ನಾಟಕದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಗುಡು
ರಾಜ್ಯದಲ್ಲಿ ಬಿಸಿಲಿನ ನಡುವೆ ಗುಡುಗು ಮಳೆ ಮುನ್ಸೂಚನೆ


ಬೆಂಗಳೂರು, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣ ಹವಾಮಾನ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನ ನಂತರ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಕರ್ನಾಟಕದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು–ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

ಹೀಗಾಗಿ ಬಿಸಿಲಿನ ತಾಪಮಾನ ಮುಂದುವರಿದರೂ, ಕೆಲವೆಡೆ ತಾತ್ಕಾಲಿಕವಾಗಿ ಮಳೆಯು ಶಮನವನ್ನು ನೀಡುವ ಸಾಧ್ಯತೆ ಇದೆ. ಸಾರ್ವಜನಿಕರು ಗುಡುಗು–ಸಿಡಿಲಿನ ಸಂದರ್ಭ ಜಾಗ್ರತೆ ವಹಿಸುವಂತೆ ಸಲಹೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande