ಧಾರವಾಡದಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ
ಧಾರವಾಡ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಅವೀರ ಉಪ್ಪಿನಕಾಯಿ ಕಂಪನಿಯಲ್ಲಿ ಮಹಿಳಾ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಅಕ್ಕ ಪಡೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯವೈಖರಿ ಕುರಿತು
Awareness


ಧಾರವಾಡ, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯ ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಅವೀರ ಉಪ್ಪಿನಕಾಯಿ ಕಂಪನಿಯಲ್ಲಿ ಮಹಿಳಾ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಅಕ್ಕ ಪಡೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯವೈಖರಿ ಕುರಿತು ಮಾಹಿತಿ ನೀಡಲಾಯಿತು. ಮಹಿಳೆಯರು ಹಾಗೂ ಮಕ್ಕಳ ಹಕ್ಕುಗಳು, ಸರ್ಕಾರದ ಯೋಜನೆಗಳು ಮತ್ತು ಲಭ್ಯ ಸೌಲಭ್ಯಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು.

ಇದೇ ವೇಳೆ, ಮಕ್ಕಳ ಸಹಾಯವಾಣಿ 1098, ಮಹಿಳಾ ಸಹಾಯವಾಣಿ 181 ಹಾಗೂ ತುರ್ತು ಸಹಾಯವಾಣಿ 112 ಕುರಿತು ಅರಿವು ಮೂಡಿಸಿ, ಅಗತ್ಯ ಸಂದರ್ಭಗಳಲ್ಲಿ ಈ ಸೇವೆಗಳನ್ನು ಬಳಸಿಕೊಳ್ಳುವಂತೆ ಸಲಹೆ ನೀಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande