ಆಲಗೂರದಲ್ಲಿ ಪಂಚಕಲ್ಯಾಣ ಮಹೋತ್ಸವ ; ಬಂದೋಬಸ್ತ್ ಕರ್ತವ್ಯಕ್ಕೆ ಪೊಲೀಸರಿಗೆ ಸೂಚನೆ
ಬಾಗಲಕೋಟೆ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಆಲಗೂರ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ 1008 ಭಗವಾನ ಆದಿನಾಥ ತೀರ್ಥಂಕರ ಹಾಗೂ ನವಗ್ರಹ ತೀರ್ಥಂಕರ, ಭಗವಾನ ಭರತೇಶ್ವರ ಜಿನಬಿಂಬ ಪಂಚಕಲ್ಯಾಣ ಮಹಾ ಮಹೋತ್ಸವ, ಶ್ರೀ 1008 ಭಗವಾನ ಪಾರ್ಶ್
ಕಲ್ಯಾಣೋತ್ಸವ


ಬಾಗಲಕೋಟೆ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಆಲಗೂರ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ 1008 ಭಗವಾನ ಆದಿನಾಥ ತೀರ್ಥಂಕರ ಹಾಗೂ ನವಗ್ರಹ ತೀರ್ಥಂಕರ, ಭಗವಾನ ಭರತೇಶ್ವರ ಜಿನಬಿಂಬ ಪಂಚಕಲ್ಯಾಣ ಮಹಾ ಮಹೋತ್ಸವ, ಶ್ರೀ 1008 ಭಗವಾನ ಪಾರ್ಶ್ವನಾಥ ತೀರ್ಥಂಕರರ ಮಹಾಮಸ್ತಕಾಭಿಷೇಕ ಹಾಗೂ ವಜ್ರ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿವೆ.

ಈ ಹಿನ್ನೆಲೆಯಲ್ಲಿ ಭಗವಾನ ಜನ ಕಲ್ಯಾಣ ಮಹೋತ್ಸವ ಪ್ರವಚನ, ಮೆರವಣಿಗೆ, ಸಂಗೀತ ಆರತಿ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳಿಗೆ ಸೂಕ್ತ ಭದ್ರತೆ ಒದಗಿಸಲು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ಕಾರ್ಯಕ್ರಮಗಳು ಶಾಂತಿಯುತವಾಗಿ ಹಾಗೂ ನಿಯಮಬದ್ಧವಾಗಿ ನಡೆಯುವಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande