
ಧಾರವಾಡ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ 2026-27 ನೇ ಸಾಲಿನ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಏಪ್ರೀಲ್ 29, 2026 ರೊಳಗಾಗಿ ವೆಬ್ಸೈಟ್ https://kreis.karnataka.gov.in ಅಥವಾ https://kreisportal.karnataka.gov.in/ipuappln/forms/online1 ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೆಬ್ಬಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಮೊ:7619168507, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಕಾಲೇಜು ಮೊ:9448307622, ತರ್ಲಘಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು 9663338287, ಗಂಜಿಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮೊ. 7829956092 ಗೆ ಸಂಪರ್ಕಿಸಬಹುದು ಎಂದು ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa