ಮಹಿಳಾ ಮೀಸಲಾತಿ : ಮೇ 1ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನಾ ಸಮಾವೇಶ
ಹುಬ್ಬಳ್ಳಿ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಲೋಕ ಸಭೆ ಹಾಗೂ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ “ನಾರಿ ಶಕ್ತಿ ವಂದನ ಅಧಿನಿಯಮ” ಮಸೂದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದನ್ನು ಖಂಡಿಸಿ, ಮೇ 1, 2026 ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಸ
ಮಹಿಳಾ ಮೀಸಲಾತಿ : ಮೇ 1ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನಾ ಸಮಾವೇಶ


ಹುಬ್ಬಳ್ಳಿ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಲೋಕ ಸಭೆ ಹಾಗೂ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ “ನಾರಿ ಶಕ್ತಿ ವಂದನ ಅಧಿನಿಯಮ” ಮಸೂದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದನ್ನು ಖಂಡಿಸಿ, ಮೇ 1, 2026 ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಸಮಾವೇಶವನ್ನು ಆಯೋಜಿಸಲಾಗಿದೆ.

ಈ ಸಮಾವೇಶದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಧಾರವಾಡ ವಿಭಾಗದ ಸಭೆ ನಡೆದಿದ್ದು, ಶಾಸಕ ಮಹೇಶ ಟೆಂಗಿನಕಾಯಿ ಭಾಗವಹಿಸಿದರು.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯನ್ನು ತೀವ್ರವಾಗಿ ಟೀಕಿಸಿ, ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande