
ಬಾಗಲಕೋಟೆ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಮತಪೆಟ್ಟಿಗೆಗಳನ್ನು ಸಂಗ್ರಹಿಸಲಾದ ಸ್ಟ್ರಾಂಗ್ ರೂಮ್ ಗಳ ಭದ್ರತೆಯ ನಿಮಿತ್ತ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಕ್ತ ಮಾರ್ಗ ಸೂಚಿಗಳನ್ನು ನೀಡಲಾಯಿತು.
ಭದ್ರತೆ ವೇಳೆ ಯಾವುದೇ ರೀತಿಯ ನಿರ್ಲಕ್ಷ್ಯವಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದ್ದು, ಸ್ಟ್ರಾಂಗ್ ರೂಮ್ ಸುತ್ತಮುತ್ತಲಿನ ಪ್ರದೇಶದಲ್ಲಿ 24 ಗಂಟೆಗಳ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಿಸಿಟಿವಿ ಮೇಲ್ವಿಚಾರಣೆ, ಪ್ರವೇಶ ನಿಯಂತ್ರಣ ಸೇರಿದಂತೆ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದು, ಚುನಾವಣಾ ಪ್ರಕ್ರಿಯೆ ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande