
ಬಾಗಲಕೋಟೆ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಕಿಲ್ಲಾ, ಕೋಳಿ ಬಜಾರ್ ಹಾಗೂ ಅಲಂಪೂರಪೇಟೆ ಪ್ರದೇಶಗಳ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆ ಶನಿವಾರ ಕಂಠಿ ವೃತ್ತದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಬಹುಕಾಲದಿಂದ ನೀರಿನ ಸಮಸ್ಯೆ ಎದುರಿಸುತ್ತಿರುವುದಾಗಿ ಆರೋಪಿಸಿದ ಸ್ಥಳೀಯರು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸಮಸ್ಯೆ ಪರಿಹರಿಸಬೇಕೆಂದು ಆಗ್ರಹಿಸಿದರು. ರಸ್ತೆ ಬಂದ್ನಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಸ್ಥಳಕ್ಕೆ ಬಂದ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande