
ಶಿವಮೊಗ್ಗ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಡ್ರೋನ್ ಕಣ್ಗಾವಲನ್ನು ಪ್ರಾರಂಭಿಸಿದೆ.
ನಗರದ ರಾಗಿಗುಡ್ಡ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್ ಹಾರಿಸಿ, ಸಂಶಯಾಸ್ಪದ ಚಟುವಟಿಕೆಗಳು, ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹಾಗೂ ಅಕ್ರಮ ಚಟುವಟಿಕೆಗಳ ಮೇಲೆ ವಿಶೇಷ ನಿಗಾವಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ. ನಾಗರಿಕರು ಸಹ ಪೊಲೀಸರೊಂದಿಗೆ ಸಹಕರಿಸಿ, ಶಾಂತಿ–ಸುವ್ಯವಸ್ಥೆ ಕಾಪಾಡಲು ಕೈಜೋಡಿಸಬೇಕೆಂದು ಮನವಿ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa