ಮಾದಕ ವಸ್ತು, ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸಿದ ಪೊಲೀಸ್ ಇಲಾಖೆ
ಬಾಗಲಕೋಟೆ , 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಾದಕ ವಸ್ತುಗಳ ಬಳಕೆ ಕ್ಷಣಿಕ ಸಂತೋಷವನ್ನು ನೀಡಿದರೂ, ಅದು ವ್ಯಕ್ತಿಯ ಜೀವನದಲ್ಲಿ ದೀರ್ಘಕಾಲೀನ ನೋವು ಮತ್ತು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂಬ ಸಂದೇಶವನ್ನು ರಾಜ್ಯ ಪೊಲೀಸ್ ಇಲಾಖೆ ಜಾಗೃತಿ ಅಭಿಯಾನದ ಮೂಲಕ ಜನರಿಗೆ ತಲುಪಿಸಿದೆ. ಇಂದು ಮಾದಕ
ಡ್ರಗ್


ಬಾಗಲಕೋಟೆ , 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಾದಕ ವಸ್ತುಗಳ ಬಳಕೆ ಕ್ಷಣಿಕ ಸಂತೋಷವನ್ನು ನೀಡಿದರೂ, ಅದು ವ್ಯಕ್ತಿಯ ಜೀವನದಲ್ಲಿ ದೀರ್ಘಕಾಲೀನ ನೋವು ಮತ್ತು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂಬ ಸಂದೇಶವನ್ನು ರಾಜ್ಯ ಪೊಲೀಸ್ ಇಲಾಖೆ ಜಾಗೃತಿ ಅಭಿಯಾನದ ಮೂಲಕ ಜನರಿಗೆ ತಲುಪಿಸಿದೆ.

ಇಂದು ಮಾದಕ ವಸ್ತುಗಳ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರ ಕುರಿತು ಬಾಗಲಕೋಟೆ ಜಿಲ್ಲೆಯ ಪೊಲೀಸ್ ಇಲಾಖೆ ಜಾಗ್ರತೆ ಅಭಿಯಾನ ನಡೆಸಿತು.

ಮಾನಸಿಕ ಒತ್ತಡ, ಆತಂಕ, ಮನೋವಿಕಾರಗಳು ಸೇರಿದಂತೆ ಹಲವು ಸಮಸ್ಯೆಗಳನ್ನು ಉಂಟುಮಾಡುತ್ತದೆ. ದೀರ್ಘಕಾಲ ಬಳಕೆಯಿಂದ ಹೃದಯ, ಯಕೃತ್ ಹಾಗೂ ನರಮಂಡಲದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ವ್ಯಕ್ತಿಯ ದೈನಂದಿನ ಜೀವನವೇ ಅಸ್ತವ್ಯಸ್ತವಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಇದರ ಜೊತೆಗೆ ಡ್ರಗ್ಸ್ ವ್ಯಸನದಿಂದ ಕುಟುಂಬ ಸಂಬಂಧಗಳು ಹದಗೆಡುವುದು, ಸಾಮಾಜಿಕವಾಗಿ ದೂರವಾಗುವುದು ಹಾಗೂ ಶಿಕ್ಷಣ ಮತ್ತು ಉದ್ಯೋಗದ ಮೇಲೆ ಕೆಟ್ಟ ಪರಿಣಾಮ ಬೀರುವುದರಿಂದ ಯುವಜನತೆ ತಮ್ಮ ಭವಿಷ್ಯವನ್ನು ಕತ್ತಲೆಯ ಕಡೆ ತಳ್ಳಿಕೊಳ್ಳುವ ಪರಿಸ್ಥಿತಿ ಉಂಟಾಗುತ್ತದೆ. ಅಪರಾಧ ಚಟುವಟಿಕೆಗಳಿಗೆ ಒಳಗಾಗುವ ಸಾಧ್ಯತೆ ಕೂಡ ಹೆಚ್ಚುತ್ತದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ, ವಿಶೇಷವಾಗಿ ಬೆಳೆಗಾವಿ ವಲಯದ ಐಜಿಪಿ ಕಚೇರಿ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಜಂಟಿಯಾಗಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಶಾಲೆಗಳು, ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸಿ, ಯುವಕರಿಗೆ ಮಾದಕ ವಸ್ತುಗಳ ಅಪಾಯಗಳ ಬಗ್ಗೆ ವಿವರಿಸಲಾಗುತ್ತಿದೆ.

ಪೊಲೀಸ್ ಅಧಿಕಾರಿಗಳು ಮಾತನಾಡಿ, ಉತ್ತಮ ಆರೋಗ್ಯ, ಸಕಾರಾತ್ಮಕ ಚಿಂತನೆ ಹಾಗೂ ಕುಟುಂಬ ಬಾಂಧವ್ಯ ಕಾಪಾಡಿಕೊಳ್ಳಲು ಡ್ರಗ್ಸ್ನಿಂದ ದೂರವಿರುವುದು ಅತ್ಯಗತ್ಯ ಎಂದು ತಿಳಿಸಿದರು. ಯುವಜನತೆ ತಮ್ಮ ಜೀವನದ ಗುರಿಗಳನ್ನು ಸಾಧಿಸಲು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪೋಷಕರು ಮತ್ತು ಶಿಕ್ಷಕರು ಕೂಡ ಮಕ್ಕಳ ಮೇಲಿನ ಗಮನವನ್ನು ಹೆಚ್ಚಿಸಿ, ಅವರ ಸ್ನೇಹ ವಲಯ ಹಾಗೂ ನಡವಳಿಕೆಗಳ ಬಗ್ಗೆ ಜಾಗರೂಕರಾಗಿರಬೇಕು. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಒಟ್ಟಾರೆ, “ಕ್ಷಣಿಕ ಸಂತೋಷಕ್ಕಾಗಿ ಜೀವನವನ್ನು ಹಾಳುಮಾಡಿಕೊಳ್ಳಬೇಡಿ – ಉತ್ತಮ ಭವಿಷ್ಯಕ್ಕಾಗಿ ಡ್ರಗ್ಸ್ನಿಂದ ದೂರವಿರಿ” ಎಂಬ ಘೋಷವಾಕ್ಯವನ್ನು ಮುಂದಿಟ್ಟುಕೊಂಡು ರಾಜ್ಯ ಪೊಲೀಸ್ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande