
ಬಾಗಲಕೋಟೆ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬನಹಟ್ಟಿ ಪೊಲೀಸ್ ಠಾಣೆ ಅಪರಾಧ ಪ್ರಕರಣ ಸಂಖ್ಯೆ 58/2025 ಸಂಬಂಧ ಕಾಣೆಯಾಗಿದ್ದ ಬಾಲಕಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿ, ಆಕೆಯನ್ನು ಸುರಕ್ಷಿತವಾಗಿ ಪಾಲಕರೊಂದಿಗೆ ಕಳುಹಿಸಿದರು.
ಈ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಂಡ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಾಲಕಿಯ ಆರೋಗ್ಯ ಮತ್ತು ಸುರಕ್ಷತೆಯನ್ನು ಪರಿಶೀಲಿಸಿದ ನಂತರ ಆಕೆಯನ್ನು ಕುಟುಂಬದವರಿಗೆ ಒಪ್ಪಿಸಲಾಗಿದೆ.
ಈ ಸಂದರ್ಭದಲ್ಲಿ ಬನಹಟ್ಟಿ ಪೊಲೀಸ್ ಠಾಣೆಯ ಅಧಿಕಾರಿಗಳು ಮಾತನಾಡಿ, ಇಂತಹ ಪ್ರಕರಣಗಳಲ್ಲಿ ತಕ್ಷಣ ಮಾಹಿತಿ ನೀಡುವುದು ಅತ್ಯಂತ ಮುಖ್ಯವೆಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande