ಇಂಡಿಯಲ್ಲಿ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ , ನೂತನ ರಥೋತ್ಸವ
ವಿಜಯಪುರ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಹಾಗೂ ವಿಶ್ವಕರ್ಮ ಮಹಿಳಾ ಮಂಡಳಿಯ ಜಂಟಿ ಆಶ್ರಯದಲ್ಲಿ ಕಾಳಿಕಾದೇವಿ ಜಾತ್ರಾ ಮಹೋತ್ಸವ ಮತ್ತು ನೂತನ ರಥೋತ್ಸವ ಕಾರ್ಯಕ್ರಮ ಭಕ್ತಿ, ಸಂಪ್ರದಾಯ ಮತ್ತು ಸಂಭ್ರಮದ ನಡುವೆ ವಿಜೃಂಭಣೆಯಿಂದ ನ
ಇಂಡಿ


ವಿಜಯಪುರ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಹಾಗೂ ವಿಶ್ವಕರ್ಮ ಮಹಿಳಾ ಮಂಡಳಿಯ ಜಂಟಿ ಆಶ್ರಯದಲ್ಲಿ ಕಾಳಿಕಾದೇವಿ ಜಾತ್ರಾ ಮಹೋತ್ಸವ ಮತ್ತು ನೂತನ ರಥೋತ್ಸವ ಕಾರ್ಯಕ್ರಮ ಭಕ್ತಿ, ಸಂಪ್ರದಾಯ ಮತ್ತು ಸಂಭ್ರಮದ ನಡುವೆ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ , ಇಂತಹ ಜಾತ್ರಾ ಮಹೋತ್ಸವಗಳು ಸಮಾಜದ ಏಕತೆ, ಧಾರ್ಮಿಕ ನಂಬಿಕೆ ಮತ್ತು ಪರಂಪರೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ದೇವಿ ಆರಾಧನೆ ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು, ಇಂತಹ ಕಾರ್ಯಕ್ರಮಗಳು ಯುವ ಪೀಳಿಗೆಗೆ ಸಂಸ್ಕೃತಿ ಪರಿಚಯಿಸುವ ಉತ್ತಮ ವೇದಿಕೆಗಳಾಗಿವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ರಥವನ್ನು ಪೂಜ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಶಾಸ್ತ್ರೋಕ್ತವಾಗಿ ಪೂಜಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವದ ವೇಳೆ ಭಕ್ತರು ಭಕ್ತಿಭಾವದಿಂದ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು. ಗ್ರಾಮದಲ್ಲಿ ಧಾರ್ಮಿಕ ಉತ್ಸಾಹ ಮೇಳೈಸಿದ್ದು, ಎಲ್ಲೆಡೆ ಭಕ್ತರ ಸಂಚಾರದಿಂದ ಹಬ್ಬದ ವಾತಾವರಣ ಕಂಡು ಬಂತು.

ಇದೇ ವೇಳೆ ವೇದ ಮಂತ್ರಗಳೊಂದಿಗೆ ಶಾಸ್ತ್ರೋಕ್ತವಾಗಿ ಉಚಿತ ಸಾಮೂಹಿಕ ಉಪನಯನ ಕಾರ್ಯಕ್ರಮವೂ ನಡೆಯಿತು. ಅನೇಕ ಬಾಲಕರು ಉಪನಯನ ಸಂಸ್ಕಾರವನ್ನು ಸ್ವೀಕರಿಸಿ ಧಾರ್ಮಿಕ ಪರಂಪರೆಯನ್ನು ಮುಂದುವರಿಸುವ ಸಂಕಲ್ಪ ಮಾಡಿಕೊಂಡರು. ಈ ಕಾರ್ಯಕ್ರಮವು ಸಮಾಜದಲ್ಲಿ ಧಾರ್ಮಿಕ ಮೌಲ್ಯಗಳ ಉಳಿವಿಗೆ ಸಹಕಾರಿಯಾಗಿದೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ವಿಶ್ವಕರ್ಮ ಸಮಾಜದ ಮುಖಂಡರು, ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಹಸ್ರಾರು ಭಕ್ತರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಒಟ್ಟಾರೆ, ಇಂಡಿ ತಾಲೂಕಿನ ಈ ಜಾತ್ರಾ ಮಹೋತ್ಸವವು ಭಕ್ತಿ, ಸಂಸ್ಕೃತಿ ಮತ್ತು ಸಮಾಜದ ಐಕ್ಯತೆಯ ಪ್ರತೀಕವಾಗಿ ಮೂಡಿ ಬಂದಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande