ಏಪ್ರಿಲ್ 28 ರಂದು ಕುಂದಗೋಳದಲ್ಲಿ ಸಚಿವ ಲಾಡ್ ಜನ ಸಂಪರ್ಕ ಸಭೆ
ಧಾರವಾಡ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತದಿಂದ ಏಪ್ರಿಲ್ 28 ರಂದು ಬೆಳಿಗ್ಗೆ 11 ಗಂಟೆಗೆ ಕುಂದಗೋಳ ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನ ಸಂಪರ
ಏಪ್ರಿಲ್ 28 ರಂದು ಕುಂದಗೋಳದಲ್ಲಿ ಸಚಿವ ಲಾಡ್ ಜನ ಸಂಪರ್ಕ ಸಭೆ


ಧಾರವಾಡ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತದಿಂದ ಏಪ್ರಿಲ್ 28 ರಂದು ಬೆಳಿಗ್ಗೆ 11 ಗಂಟೆಗೆ ಕುಂದಗೋಳ ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು ಸದರಿ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಹವಾಲು, ಸಮಸ್ಯೆ, ದೂರುಗಳನ್ನು ಸಲ್ಲಿಸಿ, ಪರಿಹರಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande