
ನವದೆಹಲಿ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಅಮೆರಿಕದ ವಾಷಿಂಗ್ಟನ್ ಡಿ.ಸಿ.ಯಲ್ಲಿ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇತರ ನಾಯಕರು ಸುರಕ್ಷಿತರಾಗಿರುವುದು ಸಮಾಧಾನಕರ ಸಂಗತಿ ಎಂದು ಪ್ರಧಾನಿ ತಿಳಿಸಿದ್ದಾರೆ.
ಎಕ್ಸನಲ್ಲಿ ಪ್ರತಿಕ್ರಿಯಿಸಿರುವ ಅವರು, “ವಾಷಿಂಗ್ಟನ್ ಡಿ.ಸಿ.ಯ ಹೋಟೆಲ್ ನಲ್ಲಿ ನಡೆದ ಘಟನೆ ನಂತರ ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಯಾವುದೇ ಹಾನಿಗೊಳಗಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು. ಅವರ ನಿರಂತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನನ್ನ ಶುಭಾಶಯಗಳು” ಎಂದು ಹೇಳಿದ್ದಾರೆ.
ಇದೇ ವೇಳೆ, “ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಅದನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa