
ಧಾರವಾಡ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾ ಬಾಲಭವನದಡಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ 15 ದಿನಗಳ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ. ಶಿಬಿರದಲ್ಲಿ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಸಮೂಹ ಗೀತೆ, ಕಸದಿಂದ ರಸ, ಸ್ವಯಂ ರಕ್ಷಣೆಯ ಕಲೆಗಳು, ಕರಾಟೆ, ನಜಟಕ ಸೇರಿದಂತೆ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಶಿಬಿರಗಳನ್ನು ನಡೆಸಲಾಗುವುದು. ಬೇಸಿಗೆ ಶಿಬಿರವು ಬೆಳಿಗ್ಗೆ 9 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಇರುತ್ತದೆ.
ಆಸಕ್ತ ಮಕ್ಕಳು ಏಪ್ರೀಲ್ 30, 2026 ರೊಳಗೆ ಜಿಲ್ಲಾ ಬಾಲಭವನ ಧಾರವಾಡದ ಕಛೇರಿಗೆ ಬಂದು ನೊಂದಾಯಿಸಿಕೊಳ್ಳಬೇಕು. (ವಿಶೇಷ ಸೂಚನೆ:- ಸರ್ಕಾರಿ ಶಾಲಾ ಮಕ್ಕಳು, ಗ್ರಾಮೀಣ ಪ್ರದೇಶದ ಹಾಗೂ ಸೌಲಭ್ಯ ವಂಚಿತ ಮಕ್ಕಳಿಗೆ, ಸರ್ಕಾರಿ ಸುಧಾರಣಾ ಸಂಸ್ಥೆಗಳ ಬಾಲಕರು, ಬಾಲಕಿಯರ ಬಾಲ ಮಂದಿರದ ಮಕ್ಕಳಿಗೆ, ವಿಕಲಚೇತನ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ವಿಶೇಷ ಆದ್ಯತೆ ನೀಡಲಾಗುವುದು).
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಛೇರಿಯ ದೂರವಾಣಿ ಸಂಖ್ಯೆ: 0836-2447850 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa