ನೇಕಾರನ ಮಗಳಿಗೆ ಅನ್ಯಾಯ ಆರೋಪ : ಹಾಲ್ ಟಿಕೆಟ್ ನಿರಾಕರಣೆ, ತಂದೆಯ ಆಕ್ರಂದನ
ಬಾಗಲಕೋಟೆ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ನೇಕಾರ ಕುಟುಂಬದ ಬಾಲಕಿಗೆ ಅನ್ಯಾಯವಾಗಿರುವ ಕುರಿತು ಗಂಭೀರ ಆರೋಪ ಕೇಳಿ ಬಂದಿದ್ದು, ಈ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಅವರು ಕೂಡ
Sslv


ಬಾಗಲಕೋಟೆ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ನೇಕಾರ ಕುಟುಂಬದ ಬಾಲಕಿಗೆ ಅನ್ಯಾಯವಾಗಿರುವ ಕುರಿತು ಗಂಭೀರ ಆರೋಪ ಕೇಳಿ ಬಂದಿದ್ದು, ಈ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಅವರು ಕೂಡ ಈ ವಿಚಾರದಲ್ಲಿ ಗಮನ ಹರಿಸಿ ನ್ಯಾಯ ಒದಗಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. ಬಾಲಕಿಯ ತಂದೆಯ ಆರೋಪದ ಪ್ರಕಾರ, ತನ್ನ ಮಗಳು 10ನೇ ತರಗತಿ ಓದುತ್ತಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಶಾಲೆಗೆ ಹಾಜರಾಗದ ಕಾರಣಕ್ಕೆ ಹೆಡ್ ಮಾಸ್ಟರ್ ಹಾಲ್ ಟಿಕೆಟ್ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರಿಂದ ಬಾಲಕಿ ತೀವ್ರ ಮನನೊಂದು “ನಾನು ಸಾಯುತ್ತೇನೆ” ಎಂದು ಹೇಳುತ್ತಿದ್ದಾಳೆ ಎಂದು ತಂದೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದರ ಕುರಿತು ಮುಖ್ಯಮಂತ್ರಿಗೆ ಸಹ ಪತ್ರ ಬರೆದಿದ್ದರೂ ಇದುವರೆಗೆ ನ್ಯಾಯ ಸಿಗದೆ ಕುಟುಂಬ ಸಂಕಷ್ಟದಲ್ಲಿದೆ ಎಂದು ತಿಳಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಬಾಲಕಿಗೆ ನ್ಯಾಯ ಒದಗಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ಈ ಸಂಬಂಧ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ತುರ್ತು ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande